ಅಡ್ಯಾರ್ ಬೊಂಡ ಫ್ಯಾಕ್ಟರಿ ತಾತ್ಕಾಲಿಕ ಸ್ಥಗಿತ! ಎಳನೀರು ಕುಡಿದು 137 ಮಂದಿ ಅಸ್ವಸ್ಥ!

ಅಡ್ಯಾರಿನ ಬೊಂಡ ಫ್ಯಾಕ್ಟರಿಯ ಎಳನೀರು ಕುಡಿದು ಅಸ್ವಸ್ಥರಾದ ಪ್ರಕರಣ ಸಂಬಂಧಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ತೆರಳಿ ಪರಿಶೀಲನೆ ಮಾಡಿದ್ದಾರೆ.‌ ಅಲ್ಲದೆ, ಮುಂದಿನ ಆದೇಶದ ವರೆಗೆ ಎಳನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ನೋಟಿಸ್ ನೀಡಿದ್ದಾರೆ.‌

ಇಲಾಖೆ ಅಧಿಕಾರಿಗಳು ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ಮುಂದಿನ ಆದೇಶದ ವರೆಗೆ ತಾತ್ಕಾಲಿಕವಾಗಿ ಎಳನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ನೋಟೀಸ್ ನೀಡಿದರು. ಆನಂತರ ತುಂಬೆಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆ, ಬಿ.ಸಿ.ರಸ್ತೆಯ ಪರ್ಲಿಯಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಬಂಟವಾಳ, ಕಲ್ಲಡ್ಕದ ಪುಷ್ಪರಾಜ್ ಆಸ್ಪತ್ರೆ, ಮಂಗಳೂರು ನಗರದ ಹೈಲ್ಯಾಂಡ್ , ಯುನಿಟಿ, ಕಣಚೂರು, ಯೆನೆಪೋಯ, ಇಂಡಿಯಾನ, ಕೊಲಾಸೊ ಹಾಗೂ ಇತರೆ ವಿವಿಧ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ತಂಡಗಳಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಇದುವರೆಗೆ 137 ಮಂದಿ ಎಳನೀರು ಕುಡಿದಿರುವುದರಿಂದ ಅಸ್ವಸ್ಥರಾಗಿದ್ದು ಕಂಡುಬಂದಿದೆ. ಹೊರ ರೋಗಿಗಳಾಗಿ 84, ಒಳರೋಗಿಗಳಾಗಿ 53 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಇದುವರೆಗೆ 23 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿರುತ್ತಾರೆ. ಆಸ್ಪತ್ರೆಯಲ್ಲಿರುವ ಎಲ್ಲರ ಆರೋಗ್ಯವು ಸ್ಥಿರವಾಗಿದ್ದು ಚೇತರಿಕೆ ಹೊಂದಿದ್ದಾರೆ. ಆರೋಗ್ಯ ಇಲಾಖೆಯಿಂದ ನಿರಂತರವಾಗಿ ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿರುತ್ತದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.‌

 
 
 
 
 
 
 
 
 
 
 

Leave a Reply