ಉಡುಪಿ: ನೈಂಟಿ ಭಾಗ್ಯ ಉಚಿತ ಕೊಡಿ- ಸರಕಾರಕ್ಕೆ ಮನವಿ

ಉಡುಪಿ: ಸರ್ಕಾರ ಪಂಚ ಗ್ಯಾರಂಟಿಗಳನ್ನು ಘೋಷಿಸಿ ಅವುಗಳನ್ನು ಜಾರಿಗೊಳಿಸುತ್ತಿದೆ. ಇದೇ ವೇಳೆ ಬಜೆಟ್ನಲ್ಲಿ ಗ್ಯಾರಂಟಿಗಳ ಹೊರೆಯನ್ನು ನಿಗಿಸಲು ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.20ರಷ್ಟು ಏರಿಕೆ ಮಾಡಿದೆ. ಇದರಿಂದ ಮದ್ಯದ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಮದ್ಯಪ್ರಿಯರ ಜೇಬಿಗೆ ಕತ್ತರಿ ಬೀಳುತ್ತಿದೆ. ಈ ಹಿನ್ನೆಲೆ ಮದ್ಯ ಪ್ರಿಯರು ಸರ್ಕಾರದ ವಿರುದ್ಧ ಉಡುಪಿಯಲ್ಲಿ ವಿಶಿಷ್ಟ ಪ್ರತಿಭಟನೆ ನಡೆಸಿದರು.

ಉಡುಪಿ ನಾಗರಿಕ ಸಮಿತಿ ಸಹಕಾರದಲ್ಲಿ ಮದ್ಯಪ್ರಿಯರು ಮಂಗಳವಾರ ಬೆಳಗ್ಗೆ ಚಿತ್ತರಂಜನ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಮದ್ಯದ ಬಾಟಲಿಗೆ ಹೂಗಳಿಂದ ಅಲಂಕರಿಸಿ, ಆರತಿ ಬೆಳಗಿ, ಡೋಲು ಬಡಿದು ಗಮನ ಸೆಳೆದರು.

ನಾಗರಿಕ ಸಮಿತಿ ನಿತ್ಯಾನಂದ ಒಳಕಾಡು ಮಾತನಾಡಿ, ಸರಕಾರ ಉಚಿತ ಯೋಜನೆ ಮಾದರಿಯಲ್ಲಿ ಮದ್ಯಪ್ರಿಯರಿಗೂ ಬೆಳಗ್ಗೆ 90 ಎಂಎಲ್, ಸಂಜೆ 90 ಎಂಎಲ್ ಮದ್ಯ ಉಚಿತವಾಗಿ ನೀಡುವಂತೆ ಒತ್ತಾಯಿಸಿದರು. ಸರಕಾರಕ್ಕೆ ಹೆಚ್ಚು ಆರ್ಥಿಕ ಬಲ ನೀಡುವುದು ಮದ್ಯಪ್ರಿಯರ ಸುಂಕದಿಂದ. ಇದರಿಂದಾಗಿ ಉಚಿತ ಯೋಜನೆ ಜಾರಿಗೆ ಅನುಕೂಲವಾಗಿದೆ. ಇಷ್ಟೆಲ್ಲಾ ಸರಕಾರಕ್ಕೆ ಲಾಭವಾಗಿರುವ ಮಧ್ಯಪ್ರಿಯರಿಗೆ ಸರಕಾರ ಬಜೆಟ್ ನಲ್ಲಿ ಬೆಲೆ ಏರಿಕೆ ಮಾಡಿ ಅನ್ಯಾಯ ಮಾಡಿದೆ. ಒಂದೇ ಉಚಿತ ನೀಡಿ, ಇಲ್ಲವೇ ಮದ್ಯ ಬಂದ್ ಮಾಡಿ ಎಂದು ಮದ್ಯಪ್ರಿಯರು ಸರಕಾರವನ್ನು ಒತ್ತಾಯಿಸಿದರು.

 
 
 
 
 
 
 
 
 
 
 

Leave a Reply