ಉಡುಪಿ: ಅಂಬಲಪಾಡಿಯಲ್ಲಿ 15 ಎಕರೆ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

ಉಡುಪಿ: ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 35 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಇಂದು ಅಂಬಲಪಾಡಿ ಕುಂಜಗುಡ್ಡೆ ಯಲ್ಲಿ 15 ಎಕರೆ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ್ ರಾವ್ ಹಾಗೂ ಎ.ಸಿ.ಸಿ.ಇ.ಎ ಉಡುಪಿಯ ಅಧ್ಯಕ್ಷ ಗೋಪಾಲ್ ಭಟ್ ಭೂ ಮಾತೆಗೆ ಹಾಲನ್ನು ಅರ್ಪಿಸಿ ನೇಜಿ ನೀಡುವ ಮೂಲಕ ಯಂತ್ರ ನಾಟಿ ಕಾರ್ಯಕ್ಕೆ ಚಾಲನೆ ನೀಡಿದರು.

ಸ್ಥಳೀಯ ನಗರಸಭಾ ಸದಸ್ಯ ಹರೀಶ್ ಶೆಟ್ಟಿ, ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮನಾಥ್ ಬಿ.ಕೆ, ಚಾರ್ಟೆಡ್ ಅಕೌಂಟೆಂಟ್ ಗಣೇಶ್, ಉಡುಪಿ ಜಿಲ್ಲಾ ಇಂಜಿನಿಯರ್ಸ್ ಅಸೋಸಿಯೆಶನ್ ಕಾರ್ಯದರ್ಶಿ ಅಮಿತ್ ಅರವಿಂದ್, ಕೋಶಾಧಿಕಾರಿ ಲಕ್ಷ್ಮೀನಾರಾಯಣ ಉಪಾಧ್ಯ, ಸ್ಥಳೀಯ ಹಿರಿಯ ಕೃಷಿಕ ಸಂಜೀವ ಶೆಟ್ಟಿ ಕುಂಜಗುಡ್ಡೆ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ, ಸದಸ್ಯ ದಿನಕರ್ ಬಾಬು, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿ ಶಂಕರ್, ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ಇದರ ಗೌರವ ಸಂಚಾಲಕ ಯೋಗೀಶ್ ಶೆಟ್ಟಿ, ಪ್ರಧಾನ ಸಂಚಾಲಕ ಶಿವಕುಮಾರ್ ಅಂಬಲಪಾಡಿ, ಸಹ ಸಂಚಾಲಕ ರಾಜೇಶ್ ಸುವರ್ಣ, ಮಹೇಂದ್ರ ಕೋಟ್ಯಾನ್, ಹರೀಶ್ ಆಚಾರ್ಯ, ವಿನೋದ್ ಪೂಜಾರಿ, ಅಣ್ಣು ಪದ್ಮನಾಭ ಪೂಜಾರಿ, ಶ್ರೀಧರ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ಭಾಸ್ಕರ್, ಕುಸುಮ, ಸುಜಾತ ಮುಂತಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply