Janardhan Kodavoor/ Team KaravaliXpress
29.6 C
Udupi
Saturday, July 2, 2022
Sathyanatha Stores Brahmavara

ಸಾಮಾಜಿಕ‌ ಕಾರ್ಯಕರ್ತನ ಮೇಲೆ ಕಾರು ಹತ್ತಿಸಿ ಕೊಲೆ: ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷನ ಬಂಧನ

ಕುಂದಾಪುರ: ಯಡಮೊಗೆ ಸಾಮಾಜಿಕ‌ ಕಾರ್ಯಕರ್ತನ ಮೇಲೆ ಕಾರು ಹತ್ತಿಸಿ ಕೊಲೆಗೈದ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಆರೋಪಿ ಪಂಚಾಯತ್ ಅಧ್ಯಕ್ಷನನ್ನು ಶಂಕರನಾರಾಯಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶನಿವಾರ ರಾತ್ರಿ ಸಾಮಾಜಿಕ‌ ಕಾರ್ಯಕರ್ತ ಉದಯ್ ಗಾಣಿಗ (45) ಎಂಬವರ ಮೇಲೆ ಅವರ ಮನೆ ಎದುರಿನ‌ ರಸ್ತೆಯಲ್ಲೇ ಕಾರು ಹರಿಸಿ ಅವರನ್ನು ಕೊಲೆ ಮಾಡಲಾಗಿತ್ತು. ಉದಯ್ ಪತ್ನಿ ಕೊಟ್ಟ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ‌ ಶಂಕರನಾರಾಯಣ ಪೊಲೀಸರು ತಡರಾತ್ರಿ ಕಾರ್ಯಾಚರಣೆ ನಡೆಸಿ ಕ್ಷಿಪ್ರಗತಿಯಲ್ಲಿ ಆರೋಪಿ ಪ್ರಾಣೇಶ್ ಯಡಿಯಾಳ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ಸದ್ಯ ಪೊಲೀಸ್ ವಶದಲ್ಲಿದ್ದು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಯಾವ ಕಾರಣಕ್ಕೆ ಕೊಲೆ ಮಾಡಲಾಗಿತ್ತು ಎಂಬುದು ಪೊಲೀಸ್‌ ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಿದೆ.

ಉದಯ ಹಾಗೂ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ ಮಧ್ಯೆ ಕೊಳವೆ ಬಾವಿಗೆ ಸಂಬಂಧಿಸಿ ಎನ್ಓಸಿ ವಿಚಾರದಲ್ಲಿ ಗಲಾಟೆ ನಡೆದಿತ್ತು. ಸಾಕಷ್ಟು ಕಿರಿಕಿರಿ ಮಾಡಿ ಎನ್ಓಸಿ ಕೊಡಲಾಗಿತ್ತು.ಆ ಬಳಿಕ ಪ್ರಾಣೇಶ್ ಯಡಿಯಾಳ ಹಾಗೂ ಬಾಲಚಂದ್ರ ಭಟ್ ಜೊತೆಗೂಡಿ ಉದಯ್ ಯೊಂದಿಗೆ ಗಲಾಟೆ ನಡೆಸಿ ಬೆದರಿಕೆ ಹಾಕಿದ್ದರು ಎಂದು ಅವರ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!