ಸೆ 27. ರ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ನೀಡಿಲಿರುವ ವೆಲ್ಪೇರ್ ಪಾರ್ಟಿ ಉಡುಪಿ

ಉಡುಪಿ: ರೈತ ಸಂಘಟನೆಗಳು ಸೆಪ್ಟೆಂಬರ್ 27 ರಂದು ದೇಶಾದ್ಯಂತ ಭಾರತ್ ಬಂದ್’ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು ಸಭೆಯನ್ನು ಆಯೋಜಿಸಿದ್ದು ಇದರಲ್ಲಿ ಉಡುಪಿ ಜಿಲ್ಲೆಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅನ್ನದಾತರ ಹೋರಾಟಕ್ಕೆ ಬೆಂಬಲ ನೀಡಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಉಡುಪಿ ಜಿಲ್ಲಾ ಘಟಕ ಆಗ್ರಹಿಸಿದೆ‌.

ಕೇಂದ್ರ ಸರಕಾರ ಜಾರಿಗೆ ತಂದಿರುವ ಮೂರು ಕರಾಳ ಕೃಷಿ ತಿದ್ದುಪಡಿ ಕಾಯ್ದೆ, ಜನ ವಿರೋಧಿ ವಿದ್ಯುತ್ ಮಸೂದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ,ಎಪಿಎಂಸಿ ಕಾಯ್ದೆ ತಿದ್ದುಪಡಿ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಬೆಲೆ ಏರಿಕೆ ಮೊದಲಾದ ಜನವಿರೋಧಿ ಆಡಳಿತವನ್ನು ವಿರೋಧಿಸಿ ರೈತ ಸಂಘಟನೆಗಳು, ಪ್ರಗತಿ ಪರ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದೆ.

ಉಡುಪಿಯಲ್ಲೂ ಸಹ ಕೇಂದ್ರ ಸರಕಾರದ ಜನ ವಿರೋಧಿ ನೀತಿ ವಿರೋಧಿಸಿ ಜಾಗೃತಿ ಸಭೆಗಳನ್ನು ಆಯೋಜಿಸಲಾಗಿದೆ. ಇದಕ್ಕೆ ಸಂಪೂರ್ಣ ಉಡುಪಿಯ ನಾಗರಿಕರು ಸಂಪೂರ್ಣ ಬೆಂಬಲ ನೀಡಬೇಕೆಂದು ವೆಲ್ಫೇರ್ ಪಾರ್ಟಿಯ ಉಡುಪಿ ಜಿಲ್ಲಾ ಅಧ್ಯಕ್ಷ ಅಬ್ದುಲ್ ಅಝೀಝ್ ವಿನಂತಿಸಿದ್ದಾರೆ.

ಹಲವು ಸಮಾನ ಮನಸ್ಕ ಜನಪರ ಸಂಘಟನೆಗಳೊಂದಿಗೆ ಕೂಡಿಕೊಂಡು 27 ರಂದು ಬೃಹತ್ ಪ್ರತಿಭಟನೆ ನಡೆಲಾಗುವುದು. ಜಿಲ್ಲೆಯಾದ್ಯಂತ ಇರುವ ದಲಿತ ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಭಾಗವಹಿಸಬೇಕೆಂದು ಬಿಜೆಪಿ ಸರಕಾರದ ದುರಾಡಳಿತವನ್ನು ಖಂಡಿಸಬೇಕೆಂದು ಕರೆ ನೀಡಿದ್ದಾರೆ.

ಸೆಪ್ಟೆಂಬರ್ 27 ರಂದು ಜೋಡುಕಟ್ಟೆಯಿಂದ ನಡೆಯುವ ಬ್ರಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಬೇಕೆಂದು ವೆಲ್ಫೇರ್ ಪಾರ್ಟಿಯ ಜಿಲ್ಲಾ ಅಧ್ಯಕ್ಷ ಅಬ್ದುಲ್‌ ಅಝೀಝ್ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

 
 
 
 
 
 
 
 
 
 
 

Leave a Reply