ಬಿಜೆಪಿ ಉಡುಪಿ ಗ್ರಾಮಾಂತರ: ಬಿಪಿಎಲ್ ಕಾರ್ಡುದಾರರಿಗೆ ಉಚಿತ ಆಯುಷ್ಮಾನ್ ಭಾರತ್ ಕಾರ್ಡ್ ಅಭಿಯಾನ

ಬ್ರಹ್ಮಾವರ : ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಾರಂಬಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಗ್ರಾಮಸ್ಥರಿಗೆ ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನವನ್ನು ಬ್ರಹ್ಮಾವರ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಉಡುಪಿ ಗ್ರಾಮಾಂತರ ಅಧ್ಯಕ್ಷರಾದ ವೀಣಾ ವಿ. ನಾಯ್ಕ್ ಆ.15ರಂದು ಉದ್ಘಾಟಿಸಿದರು.ಸುಮಾರು 150ಕ್ಕೂ ಹೆಚ್ಚಿನ ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಂಡರು.

ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಷಗಣೇಶ್ ಕುಲಾಲ್, ಸಚಿನ್ ಪೂಜಾರಿ, ಉಪಾಧ್ಯಕ್ಷ ರಘುಪತಿ ಬ್ರಹ್ಮಾವರ, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗುಲಾಬಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮೀರಾ ಸದಾನಂದ ಪೂಜಾರಿ, ಹಂದಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಎಸ್.ಟಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಉಮೇಶ್ ಎ.ನಾಯ್ಕ್ ಚೇರ್ಕಾಡಿ, ಜಿಲ್ಲಾ ಅಕ್ರಮ ಸಕ್ರಮ ಸದಸ್ಯ ರಾಜು ಪೂಜಾರಿ, ಜಿಲ್ಲಾ ಬಿಜೆಪಿ ಪಂಚಾಯತ್ ರಾಜ್ ಪ್ರಕೋಷ್ಠಗಳ ಸಂಚಾಲಕ ರಾಜೀವ್ ಕುಲಾಲ್, ಸಿಎ ಬ್ಯಾಂಕ್ ನಿರ್ದೇಶಕ ರಾಜೇಶ್ ಶೆಟ್ಟಿ, ಸದಾನಂದ ಪೂಜಾರಿ, ನಾಗವೇಣಿ, ಮತ್ತು ರಮ್ಯ ಉಪ್ಪೂರು, ನಿತ್ಯಾನಂದ ಪೂಜಾರಿ, ವಾರಂಬಳ್ಳಿ ಪಂಚಾಯತ್ ಸದಸ್ಯರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply