ಅಟಲ್ ಉತ್ಸವದ ಅಂಗವಾಗಿ ಬೂತ್ ಸಂಗಮ

 ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಮತ್ತು ಗ್ರಾಮಾಂತರ ವತಿಯಿಂದ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರ ನೇತೃತ್ವದಲ್ಲಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿರುವ “ಬೂತ್ ಸಂಗಮ” ಕಾರ್ಯಕ್ರಮದ ಇಂದು ದಿನಾಂಕ 25-12-2022 ರಂದು ಎಂ.ಜಿ.ಎಂ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಅದೃಷ್ಟದ ಆಯ್ಕೆ ಮೂಲಕ ಆಯ್ಕೆಯಾದ 5 ಬೂತಿನ ಅಧ್ಯಕ್ಷರು ಹಾಗೂ ಸಮಿತಿ ಸದಸ್ಯರು ನೆರವೇರಿಸಿದರು.

ಕಾರ್ಯಕ್ರಮದ ನೇತೃತ್ವ ವಹಿಸಿದ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಮಾತನಾಡಿ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ ನಂತರ ಉಡುಪಿಗೆ ಭರಪೂರ ಅನುದಾನ ತರಲು ಅನುಕೂಲವಾಗಿದ್ದು, ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದ ಭರವಸೆಯನ್ನು ಈಡೇರಿಸಲು ಸಹಕಾರವಾಗಿದೆ. ಪಕ್ಷದ ಸೂಚಿಸಿದ ಎಲ್ಲಾ ಕೆಲಸಗಳನ್ನು ಹಾಗೂ ಜವಾಬ್ದಾರಿಯನ್ನು ಕಾರ್ಯಕರ್ತರು ನಿಷ್ಠೆಯಿಂದ ಮಾಡುತ್ತಿರುವುದರಿಂದ ಪಕ್ಷ ಬಲಿಷ್ಠವಾಗಿದೆ ಎಂದು ಹೇಳಿದ ಅವರು ಸಂಘಟನಾತ್ಮಕವಾಗಿ ಕೆಲಸ ಮಾಡಿ ಇಂದಿನ ಬೂತ್ ಸಂಗಮ ಯಶಸ್ವಿಗೊಳಿಸಿದ ಬೂತ್ ಅಧ್ಯಕ್ಷರಿಗೆ, ಕಾರ್ಯಕರ್ತರಿಗೆ ಹಾಗೂ ಬಿಜೆಪಿ ಪಕ್ಷದ ಮುಖಂಡರು, ಪದಾಧಿಕಾರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

2018 ರಿಂದ ಈವರೆಗೆ ಶಾಸಕ ರಘುಪತಿ ಭಟ್ ಅವರು ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಮಂಜೂರುಗೊಳಿಸಿದ ಯೋಜನೆಗಳ ಹಾಗೂ ಕಾಮಗಾರಿಗಳ ವಿವರಗಳ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಕೃಷಿ ಮಾಹಿತಿ ಕೈಪಿಡಿ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಕರ್ನಾಟಕ ಸಂಘಟನಾ ಕಾರ್ಯದರ್ಶಿಗಳಾದ ಜಿ.ವಿ ರಾಜೇಶ್, ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಎಸ್.ಸಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ದಿನಕರ್ ಬಾಬು, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ನಗರ ಸಭೆಯ ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ ಉಪಸ್ಥಿತರಿದ್ದರು. ಬೂತ್ ಸಂಗಮ ಕಾರ್ಯಕ್ರಮದ ಸಂಚಾಲಕರಾದ ರಾಘವೇಂದ್ರ ಕಿಣಿ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply