Janardhan Kodavoor/ Team KaravaliXpress
25.6 C
Udupi
Thursday, September 29, 2022
Sathyanatha Stores Brahmavara

ಅಟಲ್ ಜೀ ಮೇರು ವ್ಯಕ್ತಿತ್ವ, ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ: ಕುಯಿಲಾಡಿ

ಶ್ರೇಷ್ಠ ಸಂಸದೀಯ ಪಟು, ಕವಿ ಹೃದಯದ, ಮೇರು ವ್ಯಕ್ತಿತ್ವದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ
ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಮಂಗಳವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಯವರ 4ನೇ ವರ್ಷದ ಪುಣ್ಯ ಸಂಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಟಲ್ ಜೀ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.

ಭಾರತೀಯ ಜನ ಸಂಘದ ನಂತರ ಭಾರತೀಯ ಜನತಾ ಪಾರ್ಟಿಯ ಪ್ರಥಮ ಅಧ್ಯಕ್ಷರಾಗಿ ವಿರೋಧ ಪಕ್ಷದ ನಾಯಕರಾಗಿ ವಿದೇಶಾಂಗ ಸಚಿವರಾಗಿ ಮೂರು ಬಾರಿ ದೇಶದ ಪ್ರಧಾನಿಯಾಗಿ ಅತ್ಯಮೂಲ್ಯ ಸೇವೆ ಸಲ್ಲಿಸಿರುವ ಅಟಲ್ ಬಿಹಾರಿ ವಾಜಪೇಯಿ ಅವರ ಕಾಲಘಟ್ಟದಲ್ಲಿ ದೇಶವು ಮಹತ್ತರ ಅಭಿವೃದ್ಧಿಯನ್ನು ದಾಖಲಿಸಿದೆ. ಆಟಲ್ ಜೀ ಯವರು ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ರಸ್ತೆಯ ಪರಿಕಲ್ಪನೆಯನ್ನು ದೇಶಕ್ಕೆ ನೀಡಿದ ಪರಿಣಾಮವಾಗಿ ಇಂದು ದೇಶಾದ್ಯಂತ ಉತ್ತಮ ಗುಣಮಟ್ಟದ ರಸ್ತೆಗಳು ನಿರ್ಮಾಣಗೊಳ್ಳಲು ಸಾಧ್ಯವಾಗಿದೆ. ಅಟಲ್ ಜೀ ನಡೆ-ನುಡಿ, ಆಚಾರ ವಿಚಾರಗಳನ್ನು ನೆನಪಿಸಿಕೊಳ್ಳುವುದೇ ಕಾರ್ಯಕರ್ತರಿಗೆ ಸ್ಪೂರ್ತಿದಾಯಕ ಎಂದು ಕುಯಿಲಾಡಿ ಹೇಳಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ ತನ್ನ ಜೀವನದ ಸರ್ವಸ್ವವನ್ನೂ ಒಂದು ಉದಾತ್ತ ವಿಚಾರ, ತತ್ವ ಮತ್ತು ಬದ್ಧತೆಗೆ ಮುಡಿಪಾಗಿಟ್ಟು ರಾಜಕೀಯ ಕ್ಷೇತ್ರದಲ್ಲೂ ಮಾದರಿ ವ್ಯಕ್ತಿತ್ವವನ್ನು ಮೇಳೈಸಬಹುದು ಎಂದು ತೋರಿಸಿಕೊಟ್ಟ ಮಹಾನ್ ಚೇತನ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಯವರು. ವೈಯಕ್ತಿಕ ಜೀವನ ಮತ್ತು ಸಾಮಾಜಿಕ ಜೀವನ ಒಂದೇ ರೀತಿಯಾಗಿದ್ದಾಗ ಯಶಸ್ವೀ ಜನ ನಾಯಕನಾಗಲು ಸಾಧ್ಯ. ಅಟಲ್ ಜೀ ಯವರು ಬಿಟ್ಟು ಹೋದ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳುವುದೇ ಅವರ ತತ್ವ ಸಿದ್ಧಾಂತಗಳಿಗೆ ನೀಡುವ ನೈಜ ಗೌರವವೆನಿಸುವುದು ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಪ್ರವೀಣ್ ಪೂಜಾರಿ, ರತ್ನಾಕರ ಶೆಟ್ಟಿ, ವಿಜಯ್ ಭಟ್ ಕಡೆಕಾರು, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಪ್ರಮುಖರಾದ ಚಂದ್ರಶೇಖರ ಪ್ರಭು, ಸಂತೋಷ್ ಆಚಾರ್ಯ, ಕಿಶೋರ್ ಕುಮಾರ್ ಕರಂಬಳ್ಳಿ ಮುಂತಾದವರು ಉಪಸ್ಥಿತರಿದ್ದರು. ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ದೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!