ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಡುಪಿ: ದೇಶದ ಭವ್ಯ ಸಂಸ್ಕೃತಿಯ ಪ್ರತೀಕವಾಗಿರುವ ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ ಖ್ಯಾತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಜೂನ್ 21ನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ವಿಶ್ವದಾದ್ಯಂತ ಆಚರಿಸುವುದು ಭಾರತೀಯರಿಗೆ ಹೆಮ್ಮೆಯ ವಿಚಾರ. ಯೋಗಾಭ್ಯಾಸ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ಎಲ್ಲರ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಯೋಗ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ಯೋಗ ಎಂಬುದು ಭಾರತೀಯ ಜೀವನ ಪದ್ಧತಿಯ ಒಂದು ಪ್ರಮುಖ ಅಂಗವಾಗಿದೆ. ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯದ ವಿಕಸನದ ಜೊತೆಗೆ ದೈನಂದಿನ ಬದುಕಿನಲ್ಲಿ ಲವಲವಿಕೆ, ಚೈತನ್ಯ ಕಂಡುಕೊಳ್ಳಲು ಸಾಧ್ಯ.ಪ್ರಸಕ್ತ ಕೊರೋನಾ ಸಂಕಷ್ಟದ ಸಂದರ್ಭದಲ್ಲಿಯೂ ಜನತೆ ಆರೋಗ್ಯದ ಕಾಳಜಿಯಿಂದ ಮನೆ ಮನೆಗಳಲ್ಲಿ ಸ್ವಯಂಪ್ರೇರಿತರಾಗಿ ಯೋಗಾಭ್ಯಾಸದಲ್ಲಿ ತೊಡಗುವುದು ಇಂದಿನ ಅಗತ್ಯತೆ ಎಂದು ಕುಯಿಲಾಡಿ ಹೇಳಿದರು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಹೆಣ್ಣು ಕುಟುಂಬದ ಕಣ್ಣು ಇದ್ದಂತೆ. ಕುಟುಂಬದ ಸದಸ್ಯರು ಯೋಗಾಭ್ಯಾಸವನ್ನು ದಿನಚರಿಯ ಭಾಗವಾಗಿ ಅಳವಡಿಸಿಕೊಳ್ಳುವಂತೆ ಮಹಿಳೆಯರು ಪ್ರೇರಣೆ ನೀಡುವುದು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕವೆನಿಸುವುದು ಎಂದರು.

ಯೋಗ ಶಿಕ್ಷಕಿ, ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷೆ ಲೀಲಾ ಆರ್. ಅಮೀನ್ ಮತ್ತು ಯೋಗ ಸಹ ಶಿಕ್ಷಕಿ, ಉಡುಪಿ ನಗರಸಭಾ ನಾಮ ನಿರ್ದೇಶಿತ ಸದಸ್ಯೆ ಸುಭೇದಾ ಯೋಗ ತರಗತಿಯನ್ನು ನಡೆಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಕಛೇರಿ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕಷ್ಣ ಶೆಟ್ಟಿ, ಕೋಶಾಧಿಕಾರಿ ರಜನಿ ಹೆಬ್ಬಾರ್ ಮತ್ತು ಮಹಿಳಾ ಮೋರ್ಚಾ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply