ಮಲ್ಪೆ ಬೀಚ್ ನಲ್ಲಿ ಬ್ಲಾಗರ್ಸ್ ಮೀಟ್ 2.0 ಕಾರ್ಯಕ್ರಮ

ಬ್ಲಾಗರ್ಸ್ ಗಳು ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದಲ್ಲಿ ಜನರಿಗೆ ಮಾಹಿತಿ ನೀಡುವುದರಿಂದ ಜಿಲ್ಲೆಯ ಪ್ರವಾಸಿಗರ ಸಂಖ್ಯೆ ಹೆಚ್ಚುವುದರ ಜೊತೆಗೆ ಈ ಭಾಗದ ಜನರಿಗೆ ಉದ್ಯೋಗ ಅವಕಾಶಗಳು ಲಭಿಸಿ ಆರ್ಥಿಕ ಲಾಭ ವಾಗಲಿದೆ ಎಂದು ಶಾಸಕ ಯಶಪಾಲ್ ಎ ಸುವರ್ಣ ಹೇಳಿದರು.

ಅವರು ಇಂದು ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ನಗರದ ಮಲ್ಪೆ ಬೀಚ್ ನಲ್ಲಿ ನಡೆದ ಬ್ಲಾಗರ್ಸ್ ಮೀಟ್ 2.0 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರವಾಸೋದ್ಯಮದ ಬೆಳವಣಿಗೆಗಾಗಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಆಯೋಜಿಸಿದ್ದು ಪ್ರವಾಸಿ ತಾಣಗಳ ಅಭಿವೃದ್ಧಿಯಲ್ಲಿ ಇನ್ನಷ್ಟು ಸಹಕಾರಿಯಾಗಲಿದೆ ಎಂದರು.

ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ,ಜಿಲ್ಲೆಯ ಸುಂದರ ಪ್ರಾಕೃತಿಕ ತಾಣಗಳು, ಧಾರ್ಮಿಕ ಕೇಂದ್ರಗಳು , ಕಡಲ ತೀರಗಳು, ಹಳ್ಳ ಕೊಳ್ಳಗಳು ಗಳು ಸೇರಿದಂತೆ ಅನೇಕ ಪ್ರವಾಸಿ ತಾಣಗಳಿದ್ದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ, ಜಿಲ್ಲೆಯ ಪ್ರವಾಸೋದ್ಯಮದ ಬೆಳವಣಿಗೆಗೆ ಬ್ಲಾಗರ್ಸ್ ಗಳು ಇನ್ನಷ್ಟು ಪ್ರೋತ್ಸಹವನ್ನು ನೀಡಬೇಕು ಎಂದರು.

  ಪ್ರವಾಸೋದ್ಯಮದ ಏಳಿಗೆಯ ಉದ್ದೇಶದಿಂದ ಈಗಾಗಲೇ ಜಿಲ್ಲೆಯ ಹಲವು ಬೀಚ್ ಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅಸೋಸಿಯೇಶನ್ ಆಫ್ ಕೋಸ್ಟಲ್ ಟೂರಿಸಂ ಅಧ್ಯಕ್ಷ ಮನೋಹರ್ ಶೆಟ್ಟಿ, ದೇಶ ವಿದೇಶಗಳ ಜನರಿಗೆ ಜಿಲ್ಲೆಯ ಸಂಸ್ಕೃತಿ, ಆಚರಣೆ ಹಾಗೂ ಪ್ರವಾಸಿ ತಾಣಗಳ ಕುರಿತು ಮಾಹಿತಿ ನೀಡುವುದರೊಂದಿಗೆ ಪ್ರವಾಸಿಗರನ್ನು ಜಿಲ್ಲೆಯತ್ತ ಸೆಳೆಯುವ ಕಾರ್ಯವಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಸಿ. ಯು. ಕುಮಾರ್. ಟ್ರಾವೆಲ್ ಅಸೋಸಿಯೇಷನ್ ಅಧ್ಯಕ್ಷರಾದ ನಾಗರಾಜ ಹೆಬ್ಬಾರ್ , ಉಡುಪಿ ಜಿಲ್ಲಾ ಪ್ರವಾಸೋದ್ಯಮದ ಭಾಗಿದಾರರು, ರಾಷ್ಟ್ರ , ಅಂತರಾಷ್ಟ್ರ ಮಟ್ಟದ ಬ್ಲಾಗರ್ಸ್ಗಳು ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply