ಪೂರ್ಣಪ್ರಜ್ಞ ಕಾಲೇಜಿನಲ್ಲಿ ರಕ್ತದಾನ ಶಿಬಿರ

ರಕ್ತದಾನ ಶ್ರೇಷ್ಠವಾಗಿದ್ದು, ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತನಾಗಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ರಕ್ತದಾನ ಮಾಡುವುದು ಇಂದಿನ ತುರ್ತು ಅವಶ್ಯಕತೆಯಾಗಿದೆ ಎಂದು ಕರ್ನಲ್ ಆರ್ ಕೆ ಸಿಂಗ್, ಸಿ ಓ 21, ಕರ್ನಾಟಕ ಬೆಟಾಲಿಯನ್ ಎನ್. ಸಿ.ಸಿ. ಇವರು ವಿದ್ಯಾರ್ಥಿಗಳಿಗೆ ರಕ್ತದಾನದ ಮಹತ್ವವನ್ನು ವಿವರಿಸಿದರು.

 ಎನ್‌.ಸಿ.ಸಿ ದಿನಾಚರಣೆಯ ಅಂಗವಾಗಿ ದಿನಾಂಕ 21-11 23 ರಂದು ಪೂರ್ಣಪ್ರಜ್ಞ ಕಾಲೇಜು, ಎನ್ ಸಿ ಸಿ ಆರ್ಮಿ, ವಿದ್ಯಾರ್ಥಿ ಕ್ಷೇಮ ಪಾಲನಾ ಸಂಘ ಹಾಗೂ ಲಯನ್ಸ್ ಕ್ಲಬ್ ಉಡುಪಿ ದಕ್ಷಿಣ ವಿಭಾಗ ಇವರ ಜಂಟಿ ಆಶ್ರಯದಲ್ಲಿ ಏರ್ಪಡಿಸಿದ ಸ್ವಯಂ ರಕ್ತದಾನ ಶಿಬಿರವನ್ನು ಉದ್ಘಾಟಿಸಿ, ಶ್ರೀಯುತರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ, ಡಾ. ಚಂದ್ರಶೇಖರ್ ಇವರು ರಕ್ತದಾನ ಮಾಡುವುದರಿಂದ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗದು, ರಕ್ತದಾನ ಒಂದು ಶ್ರೇಷ್ಠದಾನ, ಇದರಲ್ಲಿ ವಿದ್ಯಾರ್ಥಿ ಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.

ಲಯನ್ಸ್ ಕ್ಲಬ್ ಉಡುಪಿ, ದಕ್ಷಿಣ ವಿಭಾಗದ ವಲಯಾಧ್ಯಕ್ಷ ಶ್ರೀ ಸುರೇಶ್ ಪ್ರಭು ಅವರು ತಮ್ಮ ರಕ್ತದಾನದ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಲಯನ್ಸ್ ಕ್ಲಬ್ ವಿಭಾಗದ ಸದಸ್ಯರು, ಅಧಿಕಾರಿಗಳು ಕಾಲೇಜಿನ ಉಪನ್ಯಾಸಕ, ಉಪನ್ಯಾಸಕೇತರರು ಹಾಗೂ ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಸುಮಾರು 90 ಯೂನಿಟ್ ಗಳಷ್ಟು ರಕ್ತ ಸಂಗ್ರಹಣೆ ಮಾಡಲಾಯಿತು.

 
 
 
 
 
 
 
 
 
 
 

Leave a Reply