ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಉಡುಪಿ : ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನದ ಪ್ರಯುಕ್ತ ಸೇವೆ ಮತ್ತು ಸಮರ್ಪಣೆ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಭಾಗವಹಿಸಿದರು. 

ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ಶಾಸಕ ಲಾಲಾಜಿ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ರಾಜ್ಯ ಬಿಜೆಪಿ ಎಸ್ ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಿಯಾನಂದ ಹೆಗ್ಡೆ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷ ವೀಣಾ ಶೆಟ್ಟಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply