ಉಡುಪಿ ಜಿಲ್ಲೆಯಲ್ಲಿ ಜುಲೈ 1 ರಿಂದ ಬಸ್ ಸಂಚಾರ ಆರಂಭ~ ಶಾಸಕ ಕೆ.ರಘುಪತಿ ಭಟ್ ಸಭೆ

ಕೋವಿಡ್ – 19 ಲಾಕ್ ಡೌನ್ ನಿಂದ ಬಸ್ಸು ಸಂಚಾರ ಸ್ಥಗಿತಗೊಳಿಸಲಾಗಿದ್ದು, ಪ್ರಸ್ತುತ ಅನ್ ಲಾಕ್ ಆದರೂ ಬಸ್ಸು ಸಂಚಾರ ಆರಂಭಿಸದ ಹಿನ್ನಲೆಯಲ್ಲಿ ನಿತ್ಯದ ಕೆಲಸ ಕಾರ್ಯಗಳಿಗೆ ತೆರಳುವ ಜನ ಸಾಮಾನ್ಯರು ಸಂಕಷ್ಟ ಪಡುವುದನ್ನು ಗಮನಿಸಿ ಉಡುಪಿ ಶಾಸಕ ಕೆ. ರಘುಪತಿ ಭಟ್ ರವರು ಬಸ್ಸು ಸಂಚಾರ ಪುನರಾರಂಭಿಸಲು ಇಂದು ದಿನಾಂಕ 25-06-2021 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಖಾಸಗಿ ಬಸ್ ಮಾಲಕರ ಸಂಘದವರೊಂದಿಗೆ ಸಭೆ ನಡೆಸಿದರು.ಸಭೆಯಲ್ಲಿ ಕೋವಿಡ್ ನಿಯಮಾವಳಿಯಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಜುಲೈ 1 ರಿಂದ ಜಿಲ್ಲೆಯಲ್ಲಿ ಬಸ್ ಆರಂಭಿಸಲು ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಜೆ.ಪಿ ಗಂಗಾಧರ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ, ಉಡುಪಿ ಬಸ್ ಮಾಲಕರ ಸಂಘದ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಪದಾಧಿಕಾರಿಗಳಾದ ಸದಾನಂದ ಚಾತ್ರ, ಪ್ರಸಾದ್ ಬಲ್ಲಾಳ್, ಶಿವರಾಮ ಶೆಟ್ಟಿ, ಸಂದೀಪ್ ಮುಂತಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply