Janardhan Kodavoor/ Team KaravaliXpress
24.6 C
Udupi
Monday, November 28, 2022
Sathyanatha Stores Brahmavara

ಸೆ.2 – ಕರಾವಳಿ ಜಿಲ್ಲೆಯಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೆಪ್ಟಂಬರ್ 2 ರಂದು ಮಂಗಳೂರಿನಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುವ ಹಿನ್ನಲೆಯಲ್ಲಿ, ಸದರಿ ಕಾರ್ಯಕ್ರಮಕ್ಕೆ ವಿವಿಧ ಭಾಗಗಳಿಂದ ಫಲಾನುಭವಿಗಳನ್ನು ಕರೆತರಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಹೆಚ್ಚಿನ ಸಂಖ್ಯೆಯ ಬಸ್ಸುಗಳನ್ನು ನಿಯೋಜಿಸಲಾಗಿರುತ್ತದೆ.

ಆದ್ದರಿಂದ ಸದರಿ ದಿನದಂದು ಮಂಗಳೂರು ವಿಭಾಗ ವ್ಯಾಪ್ತಿಯ ಮಂಗಳೂರು ತಾಲೂಕು, ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು, ಉಡುಪಿ, ಕಾರ್ಕಳ, ಬೈಂದೂರು, ಕುಂದಾಪುರ, ಭಟ್ಕಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ನಿಗಮದ ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕ.ರಾ.ರ.ಸಾ.ನಿಗಮದೊಂದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!