Janardhan Kodavoor/ Team KaravaliXpress
33 C
Udupi
Friday, February 26, 2021

ಬ್ರಹ್ಮಾವರ ಸಕ್ಕರೆ ಕಾರ್ಖಾನೆ: ಸಚಿವ ಕೋಟ, ಶಾಸಕ ಹಾಲಾಡಿ ಬೆಂಬಲ .

ಬ್ರಹ್ಮಾವರ :ನೆನೆಗುದಿಗೆ ಬಿದ್ದಿರುವ ದ ಕ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನರ್ ನಿರ್ಮಾಣಕ್ಕೆ ಸಂಕಲ್ಪ ತೊಟ್ಟಿರುವ ನೂತನ ಆಡಳಿತ ಮಂಡಳಿಯ ಎಲ್ಲಾ ಪ್ರಾಮಾಣಿಕ ಪ್ರಯತ್ನಕ್ಕೆ ನಮ್ಮ ಬೆಂಬಲ ಇದೆ ಎಂದು ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಸಚಿವ ರಾದ ಕೋಟಾ ಶ್ರೀನಿವಾಸ್ ಪೂಜಾರಿ ಹಾಗೂ ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ ಎಂದು ಕಾರ್ಖಾನೆಯ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ .
 ಸರಕಾರದ ಸಾಲ ಮನ್ನಾ ಹಾಗೂ ನೂತನ ಯೋಜನೆಗೆ ನೂರು ಕೋಟಿ ಬಿಡುಗಡೆಗೆ ಮನವಿ: ಸಕ್ಕರೆ ಕಾರ್ಖಾನೆಯ ನಿಯೋಗ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಹಾಗೂ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರನ್ನು ಭೇಟಿಯಾಗಿ  ಸಮಾಲೋಚನೆ ನಡೆಸಿ ಸರಕಾರದ ಸಾಲವನ್ನು ಮನ್ನಾಮಾಡಿ ಕಾರ್ಖಾನೆಯ ಪುನರ್ ನಿರ್ಮಾಣಕ್ಕೆ ಈ ಸಾಲಿನ ಬಜೆಟ್ ನಲ್ಲಿ ನೂರು ಕೋಟಿ ರುಪಾಯಿಯನ್ನು ಕಾಯ್ದಿರಿಸಬೇಕಾಗಿ ಮನವಿಯನ್ನು ಅರ್ಪಿಸಲಾಯಿತು .ಈ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಭರವಸೆಯನ್ನು ನೀಡಿದರು. 
ಕಬ್ಬು ಬೆಳೆಗೆ ಯೋಜನೆ ರೂಪಿಸಿ ~ ಹಾಲಾಡಿ: ಸಕ್ಕರೆ ಕಾರ್ಖಾನೆಯ ಪುನರ್ ನಿರ್ಮಾಣಕ್ಕೆ ಪೂರಕವಾದ ಕಬ್ಬು ಬೆಳೆಯನ್ನು ಉಡುಪಿ ಜಿಲ್ಲೆಯಾದ್ಯಂತ ಬೆಳೆಸಬೇಕಾಗಿದ್ದು ಸದ್ಯದ ಪರಿಸ್ಥಿತಿಯಲ್ಲಿ ರೈತರಿಗೆ ಲಾಭದಾಯಕವಾಗಿರುವ ಕಬ್ಬು ಬೆಳೆಯನ್ನು ಬೆಳೆಯಲು ಪ್ರೋತ್ಸಾಹಿಸಿ ರೈತರಿಗೆ ಜಾಗೃತಿ ಮೂಡಿಸುವಲ್ಲಿ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ತಿಳಿಸಿದರು ಕಾರ್ಖಾನೆಯ ನಿಯೋಗದಲ್ಲಿ ಅಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ ಉಪಾಧ್ಯಕ್ಷರಾದ ಉಮಾನಾಥ ಶೆಟ್ಟಿ, ನಿರ್ದೇಶಕರಾದ ಆಸ್ತಿಕ ಶಾಸ್ತ್ರಿ ,ಸನ್ಮತ್ ಕುಮಾರ್ ಹೆಗ್ಡೆ, ಗೀತಾ ಶಂಭು ಪೂಜಾರಿ ವ್ಯವಸ್ಥಾಪಕರಾದ ಗೋಪಾಲಕೃಷ್ಣ ಉಪಸ್ಥಿತರಿದ್ದರು
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ 

ಉಡುಪಿ:  ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ  ಶುಕ್ರವಾರ ವಿದ್ವಾನ್ ಕಬಿಯಾಡಿ​ ​ಜಯರಾಮ ​ಆಚಾರ್ಯ  ಮಾರ್ಗ ದರ್ಶನದಲ್ಲಿ  ಆಶ್ಲೇಷಾಬಲಿ , ನವಕ ಕಲಶ, ಪ್ರಧಾನ ಹೋಮ...

ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ನೂತನ  ಅಧ್ಯಕ್ಷೆ 

ಉಡುಪಿ: ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ಅವರು 2021-22 ನೇ ಸಾಲಿಗೆ 20ನೇ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಈ...

ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ಮಾರ್ಚ್,1ರಂದು ತ್ರಿಕಾಲ ಪೂಜೆ 

 ದುರ್ಗಾ ಸೇವಾ ಸಮಿತಿ ಕುಂಜೂರು ಇವರು ಆಯೋಜಿಸುವ  ಶ್ರೀ ದುರ್ಗಾ ದೇವಸ್ಥಾನ ಕುಂಜೂರು ಇಲ್ಲಿ ಮಾರ್ಚ್,1 ರಂದು  ತ್ರಿಕಾಲ ಪೂಜೆ ಅನ್ನಸಂತರ್ಪಣೆ ಮುಂತಾದ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ದಿನದ ತ್ರಿಸಂಧ್ಯಾ ಕಾಲಗಳಲ್ಲಿ  ಶ್ರೀ ದುರ್ಗಾ ಮಾತೆಗೆ ವಿಸ್ತೃತ...

ಹೆಸರಾಂತ ಆಯುರ್ವೇದ ವೈದ್ಯ ಜಿ. ಶ್ರೀನಿವಾಸ ಆಚಾರ್ಯ ನಿಧನ

ಉಡುಪಿ: ಇಲ್ಲಿನ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಪ್ರಾಚಾರ್ಯ ಡಾ. ಜಿ. ಶ್ರೀನಿವಾಸ ಆಚಾರ್ಯ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ...
error: Content is protected !!