ಬಿಜೆಪಿ ಯುವ ಮೋರ್ಚಾ ಉಡುಪಿ ಗ್ರಾಮಾಂತರ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಡುಪಿ : ಬಿಜೆಪಿ ಯುವ ಮೋರ್ಚಾ ಉಡುಪಿ ಗ್ರಾಮಾಂತರ ವತಿಯಿಂದ ರಕ್ತನಿಧಿ ವಿಭಾಗ ಕೆ.ಎಂ.ಸಿ ಮಣಿಪಾಲ ಇವರ ಸಹಕಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 71ನೇ ಜನ್ಮದಿನದ ಪ್ರಯುಕ್ತ ಸೇವೆ ಮತ್ತು ಸಮರ್ಪಣೆ ಅಭಿಯಾನದ ಅಂಗವಾಗಿ ಇಂದು ಕೊಕ್ಕರ್ಣೆ ನಾರಾಯಣ ಗುರು ಸಭಾಭವನದಲ್ಲಿ ಆಯೋಜಿಸಲಾದ ” ಸ್ವಯಂ ಪ್ರೇರಿತ ರಕ್ತದಾನ ಶಿಬಿರ” ಕಾರ್ಯಕ್ರಮದಲ್ಲಿ ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿ ಅಭಿನಂದನೆ ಸಲ್ಲಿಸಿದರು.

ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್, ಪ್ರಧಾನ ಕಾರ್ಯದರ್ಶಿ ಗಣೇಶ್ ಕುಲಾಲ್, ಸಚಿನ್ ಪೂಜಾರಿ, ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಸೂರಾಲು, ಪ್ರಧಾನ ಕಾರ್ಯದರ್ಶಿ ಅರ್ಜುನ್ ಪ್ರಭು, ರಾಜ್ಯ ಎಸ್.ಟಿ ಮೋರ್ಚಾದ ಕಾರ್ಯದರ್ಶಿ ಉಮೇಶ್ ನಾಯ್ಕ್ , ಚೇರ್ಕಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮನೋಜ್ ಶೆಟ್ಟಿ, ವಾರಂಬಳ್ಳಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೇವಾನಂದ, ಕೊಕ್ಕರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷ ಲಕ್ಷ್ಮಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ವಸಂತ್ ಸೇರ್ವೆಗಾರ್, ಸುನೀಲ್, ಪ್ರಮೀಳಾ ಜೋಗಿ, ಪೆಜಮಂಗೂರು, ಕುದಿ ಶಕ್ತಿ ಕೇಂದ್ರದ ಸಹ ಸಂಚಾಲಕರಾದ ಮಂಜುನಾಥ ಪೂಜಾರಿ, ಧನುಷ್ ಸುವರ್ಣ, ಕೆ.ಎಂ.ಸಿ ರಕ್ತನಿಧಿ ವಿಭಾಗದ ಡಾ. ಬೆಮ್ರಾ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply