ಚಂಡಮಾರುತ ದಿಂದಾಗಿ ಉಡುಪಿಯಲ್ಲಿ ಕಡಲ್ಕೋರೆತ ಜೋರು

ಉಡುಪಿ: ‘ತೌಕ್ತೆ’ ಚಂಡಮಾರುತ ಪರಿಣಾಮ ಜಿಲ್ಲೆಯಾದ್ಯಂತ ಕಡಲ್ಕೊರೆತ ಜೋರಾಗಿದ್ದು, ಕಡಲು ಪ್ರಕ್ಷುಬ್ಧಗೊಂಡಿದೆ.

ಮರವಂತೆ ಸಮುದ್ರ ತೀರದಲ್ಲಿ ಭಾರಿ ಕಡಲ್ಕೊರೆತ ಕಾಣಿಸಿಕೊಂಡಿದ್ದು , ನೂರಾರು ತೆಂಗಿನ ಮರಗಳು ಸಮುದ್ರ ಪಾಲಾಗಿವೆ. ಮೇ 15, 16 ರಂದು ಜಿಲ್ಲೆಯಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದ್ದು,ಕೇರಳ, ತಮಿಳುನಾಡು ಸಹಿತ ಕರ್ನಾಟಕದ ಕರಾವಳಿ ಭಾಗದಲ್ಲಿ ಮುನ್ನೆಚ್ಚರಿಕೆ ನೀಡಲಾಗಿದೆ.

ಬೆಳಿಗ್ಗೆಯಿಂದಲೇ ಜಿಲ್ಲೆಯಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುತ್ತಿದೆ. ಸಂಜೆಯ ಬಳಿಕ ಗಾಳಿಯ ವೇಗ ಮತ್ತಷ್ಟು ಹೆಚ್ಚುವ ಭೀತಿಯಿದೆ. ಮೀನುಗಾರರು ಕಡಲಿಗೆ ಇಳಿಯದಂತೆ ನಿನ್ನೆಯೇ ಎಚ್ಚರಿಕೆ ಸಂದೇಶ ನೀಡಲಾಗಿದೆ.ಅದರೊಂದಿಗೆ ಸಮುದ್ರತೀರ ಪ್ರದೇಶಗಳ ನಿವಾಸಿಗಳಿಗೂ ಜಾಗರೂಕರಾಗಿರುವಂತೆ ಸೂಚಿಸಲಾಗಿದೆ.

 
 
 
 
 
 
 
 
 
 
 

Leave a Reply