ಕೋವಿಡ್ ನಿಯಮ ಪಾಲಿಸಿಕೊಂಡು ಜು.5ರಿಂದ ಮಸೀದಿ ಮತ್ತು ಚರ್ಚುಗಳಲ್ಲಿ ಪ್ರಾರ್ಥನೆಗೆ ಅವಕಾಶ: ಉಡುಪಿ ಡಿಸಿ ಜಿ. ಜಗದೀಶ್

ಉಡುಪಿ: ರಾಜ್ಯ ಸರಕಾರ ಜಾರಿಗೆ ತಂದಿರುವ ಅನ್ ಲಾಕ್ 3.0 ಆದೇಶದಂತೆ ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಉಡುಪಿ ಜಿಲ್ಲೆಯ ಮಸೀದಿ ಮತ್ತು ಚರ್ಚುಗಳಲ್ಲಿ ಜುಲೈ 5 ರಿಂದ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್‌ ತಿಳಿಸಿದ್ದಾರೆ.

ಜುಲೈ 5ರಿಂದ ರಾಜ್ಯ ಸರಕಾರ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅವಕಾಶ ಕಲ್ಪಿಸಿದೆ. ಸರಕಾರದ ಆದೇಶದಂತೆ ಕಡ್ಡಾಯವಾಗಿ ಮಾಸ್ಕ್‌ ಧರಿಸುವುದರೊಂದಿಗೆ ಸುರಕ್ಷಿತವಾದ ಸಾಮಾಜಿಕ ಅಂತರ ಕಾಪಾಡಿಕೊಂಡು ಮಸೀದಿಗಳಲ್ಲಿ ಸಾಮೂಹಿಕ ನಮಾಝ್‌ ಮತ್ತು ಚರ್ಚುಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply