ಉಡುಪಿಯಲ್ಲಿ ಕಾಂಗ್ರೆಸ್ ತೆಕ್ಕೆಯಿಂದ ಬಿಜೆಪಿ ತೆಕ್ಕೆಗೆ 

ಕಾಂಗ್ರೆಸ್ ಪಕ್ಷದ ನಾಯಕರು, ಜನಪ್ರತಿನಿಧಿಗಳು ಬಿಜೆಪಿಗೆ ಸೇರುತ್ತಿದ್ದು, ​ಸೋಮವಾರದಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಾಸಕ ಕೆ. ರಘುಪತಿ ಭಟ್ ಪಕ್ಷದ ಶಾಲು ಹಾಗೂ ಧ್ವಜವನ್ನು ನೀಡಿ ಕಾಂಗ್ರೆಸ್ ಪಕ್ಷದ ನಾಯಕರು, ಜನಪ್ರತಿನಿಧಿಗಳನ್ನು ಪಕ್ಷಕ್ಕೆ ಬರಮಾಡಿಕೊಂಡರು.ಕಾಂಗ್ರೆಸ್ಸ್ ನ ಉಮೇಶ್ ಎ. ನಾಯ್ಕ ತಾಲೂಕು ಪಂಚಾಯತ್ ಮಾಜಿ ಸದಸ್ಯರು, ರಾಘವೇಂದ್ರ ಜೆ.ಬಿ. ಕಾಂಗ್ರೆಸ್ಸಿನ ಬ್ಲಾಕ್ ಹಿಂದುಳಿದ ವರ್ಗದ ಅಧ್ಯಕ್ಷರು, ಜಯಲಕ್ಷ್ಮಿ ಹಾರಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ರಮೇಶ್ ಪೂಜಾರಿ ನೀಲಾವರ ಪಂಚಾಯತ್ ಮಾಜಿ ಉಪಾಧ್ಯಕ್ಷರು, ಗುರುರಾಜ್ ರಾವ್ ಆರೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗೂ ನೀಲಾವರ ಪಂಚಾಯತ್ ಮಾಜಿ ಸದಸ್ಯೆ ಹೇಮಾ ವಿ. ಬಾಸ್ರಿ ಸೇರಿದಂತೆ ಹಲವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.   

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿ ಅಮೀನ್, ಯಶ್ಪಾಲ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಪಕ್ಷದ ಪ್ರಮುಖರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಮತ್ತು ನಗರಸಭಾ ಸದಸ್ಯರು, ಪಕ್ಷದ ಕಾರ್ಯಕರ್ತರು, ಪ್ರಮುಖರು, ಹಿರಿಯರು, ಉಪಸ್ಥಿತರಿದ್ದರು.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply