Janardhan Kodavoor/ Team KaravaliXpress
33 C
Udupi
Friday, February 26, 2021

ಹಿನ್ನೀರಿನಲ್ಲಿ ಫ್ಲೋಟಿಂಗ್ ರೆಸ್ಟೋರೆಂಟ್ ಅಭಿವೃದ್ಧಿ : ಜಿ.ಜಗದೀಶ್

ಉಡುಪಿ: ಸಮುದ್ರ ಮತ್ತು ನದಿ ವ್ಯಾಪ್ತಿಯಲ್ಲಿನ ಹಿನ್ನೀರಿನ ಪ್ರದೇಶದಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ತೇಲುವ ರೆಸ್ಟೋರೆಂಟ್‌ಗಳನ್ನು ನಿರ್ಮಿಸಬಹುದು, ಹೀಗಾಗಿ ಈ ಕುರಿತಂತೆ ಖಾಸಗಿ ಸಂಸ್ಥೆ, ವ್ಯಕ್ತಿಗಳಿಂದ ಆಸಕ್ತಿ ವ್ಯಕ್ತಪಡಿಸುವ ಕುರಿತು ಅರ್ಜಿ ಆಹ್ವಾನಿಸಿ, ನಂತರ ಟೆಂಡರ್ ಕರೆಯುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿಯಲ್ಲಿ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಲು ಬಹಳ ಅವಕಾಶಗಳಿವೆ. ಪಡುಬಿದ್ರೆಯ ನಂತರ ಕುಂದಾಪುರದ ಕೋಡಿ ಬೀಚ್‌ನ್ನು ಬ್ಲೂಫ್ಲಾ ಗ್ ಮಾನ್ಯತೆ ಪಡೆಯುವ ಕುರಿತಂತೆ ಅಭಿವೃದ್ಧಿ ಪಡಿಸಲು ಪ್ರಾಥಮಿಕ ಸರ್ವೆ ನಡೆಸಲಾಗಿದೆ. ಪಡುವರಿ ಬೀಚ್‌ನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಪ್ಲಾನ್ ತಯಾರಿಸಲಾಗುತ್ತಿದೆ.

ಒತ್ತಿನೆಣೆಯಲ್ಲಿ ಟ್ರೀಪಾರ್ಕ್, ರೆಸ್ಟೋರೆಂಟ್ ಸೇರಿದಂತೆ ವಿವಿಧ ಸೌಲಭ್ಯಗಳುಳ್ಳ ಟೂರಿಸಂ ಹಬ್ ಮಾಡಲು ಪ್ಲಾನ್ ಮಾಡಲಾಗುತ್ತಿದೆ. ಜಿಲ್ಲೆಯ ಎಲ್ಲಾ ಬೀಚ್‌ಗಳು ತಮ್ಮದೇ ಆದಾಯದಿಂದ, ಬೀಚ್ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ, ಆರ್ಥಿಕವಾಗಿ ಸಶಕ್ತ ಬೀಚ್‌ಗಳನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಸ್ಥಳೀಯರಿಗೆ ಪಡುಬಿದ್ರೆ ಬ್ಲೂ ಫ್ಲ್ಯಾಗ್ ಬೀಚ್‌ನಿಂದ ತೊಂದರೆಯಾಗುತ್ತಿರುವ ಬಗ್ಗೆ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದ್ದು, ಪಡುಬಿದ್ರೆ ಮುಖ್ಯ ಬೀಚ್‌ನಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಹಾಗೂ ಬೀಚ್‌ನ ನಿರ್ವಹಣೆಯನ್ನು ಸ್ಥಳೀಯರಿಗೆ ನೀಡಲು, ಕಾಪು ಬೀಚ್‌ನ ನಿರ್ವಹಣೆಯನ್ನು ಸ್ಥಳೀಯರಿಗೆ ನೀಡುವ ಕುರಿತಂತೆ ಕ್ರಮ ಕೈಗೊಳ್ಳಲು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಅನುಮತಿ ಪಡೆಯದೇ ಕಾರ್ಯ ನಿರ್ವಹಿಸುತ್ತಿರುವ ಹೋಂ ಸ್ಟೇಗಳು ಕಡ್ಡಾಯವಾಗಿ ನೊಂದಣಿ ಮಾಡಿ ಕೊಳ್ಳಬೇಕು, ತಪ್ಪಿದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಿ, ಹೋಂ ಸ್ಟೇಗಳ ಮಾಲೀಕರಿಗೆ ಮತ್ತು ಹೊಸದಾಗಿ ಹೋಂ ಸ್ಟೇ ಮಾಡಲು ಇಚ್ಚಿಸುವವರಿಗೆ ಸೂಕ್ತ ಮಾಹಿತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಗಾರವನ್ನು ಏರ್ಪಡಿಸಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮಾತನಾಡಿ ಜಿಲ್ಲೆಯಲ್ಲಿನ ಜಲಪಾತಗಳನ್ನು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಅವಕಾಶಗಳಿದ್ದು, ಈ ಕುರಿತು ಪ್ರವಾಸೋದ್ಯಮ ಇಲಾಖೆಯಿಂದ ಯೋಜನೆ ರೂಪಿಸಿ, ಜಲಪಾತ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಪ್ರವಾಸಿ ಸ್ಥಳಗಳಲ್ಲಿ ಸುವ್ಯವಸ್ಥಿತ ಶೌಚಾಲಯಗಳನ್ನು ನಿರ್ಮಿಸಿ, ಉತ್ತಮ ರಸ್ತೆಗಳನ್ನು ನಿರ್ಮಿಸುವುದರಿಂದ ಪ್ರವಾಸೋದ್ಯಮ ಬೆಳವಣಿಗೆ ಹೊಂದಲು ಸಾಧ್ಯವಾಗಲಿದೆ, ಈ ಬಗ್ಗೆ ಗಮನ ಹರಿಸಿ ಎಂದು ಹೇಳಿದರು.

ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಶಾಸಕ ಲಾಲಾಜಿ ಆರ್ ಮೆಂಡನ್, ಜಿ.ಪಂ. ಸದಸ್ಯ ಶಶಿಕಾಂತ ಪಡುಬಿದ್ರಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್, ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಪ್ರವಾಸೋದ್ಯಮ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ 

ಉಡುಪಿ:  ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ  ಶುಕ್ರವಾರ ವಿದ್ವಾನ್ ಕಬಿಯಾಡಿ​ ​ಜಯರಾಮ ​ಆಚಾರ್ಯ  ಮಾರ್ಗ ದರ್ಶನದಲ್ಲಿ  ಆಶ್ಲೇಷಾಬಲಿ , ನವಕ ಕಲಶ, ಪ್ರಧಾನ ಹೋಮ...

ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ನೂತನ  ಅಧ್ಯಕ್ಷೆ 

ಉಡುಪಿ: ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ಅವರು 2021-22 ನೇ ಸಾಲಿಗೆ 20ನೇ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಈ...

ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ಮಾರ್ಚ್,1ರಂದು ತ್ರಿಕಾಲ ಪೂಜೆ 

 ದುರ್ಗಾ ಸೇವಾ ಸಮಿತಿ ಕುಂಜೂರು ಇವರು ಆಯೋಜಿಸುವ  ಶ್ರೀ ದುರ್ಗಾ ದೇವಸ್ಥಾನ ಕುಂಜೂರು ಇಲ್ಲಿ ಮಾರ್ಚ್,1 ರಂದು  ತ್ರಿಕಾಲ ಪೂಜೆ ಅನ್ನಸಂತರ್ಪಣೆ ಮುಂತಾದ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ದಿನದ ತ್ರಿಸಂಧ್ಯಾ ಕಾಲಗಳಲ್ಲಿ  ಶ್ರೀ ದುರ್ಗಾ ಮಾತೆಗೆ ವಿಸ್ತೃತ...

ಹೆಸರಾಂತ ಆಯುರ್ವೇದ ವೈದ್ಯ ಜಿ. ಶ್ರೀನಿವಾಸ ಆಚಾರ್ಯ ನಿಧನ

ಉಡುಪಿ: ಇಲ್ಲಿನ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಪ್ರಾಚಾರ್ಯ ಡಾ. ಜಿ. ಶ್ರೀನಿವಾಸ ಆಚಾರ್ಯ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ...
error: Content is protected !!