ರಸ್ತೆಗಿಳಿದು ಕಾರ್ಯಾಚರಣೆ ನಡೆಸಿದ ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಕೊರೋನಾದ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಉಡುಪಿಯ ಅನೇಕ ಜನರು ಮಾಸ್ಕ್ ಧರಿಸುವುದರ ಕುರಿತು ಹೆಚ್ಚು ಗಮನ ಹರಿಸುತ್ತಿಲ್ಲ. ಅಂತವರಿಗೆಲ್ಲಾ ಶಾಕ್ ಕೊಟ್ಟಿದ್ದಾರೆ ಉಡುಪಿಯ ಜಿಲ್ಲಾಧಿಕಾರಿ,

ಹೌದು….ಜಿಲ್ಲಾಡಳಿತದ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು ಮಾಸ್ಕ್ ಧರಿಸದೆ ತಿರುಗಾಡುತ್ತಿದ್ದವರನ್ನು ಜಿಲ್ಲಾಧಿಕಾರಿ ಗಳು ತಾವೇ ಸ್ವತಃ ಹಿಡಿದು ದಂಡ ವಿಧಿಸಿ ಕೊರೋನಾದ ಅಗತ್ಯ ಸುರಕ್ಷ ಕ್ರಮ ಪಾಲಿಸುವಂತೆ ಎಚ್ಚರಿಸಿದ್ದಾರೆ.

ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಸ್ತೆಗಿಳಿದ ಡಿಸಿ ಮಾಸ್ಕ್ ಧರಿಸದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ಸಂದರ್ಭ ಮಾತನಾಡಿದ ಜಿ.ಜಗದೀಶ್ ರವರು ಮಾಸ್ಕ್ ಧರಿಸದಿದ್ದವರಿಗೆ ದಂಡ ವಿಧಿಸುವ ಕಾರ್ಯ ಮುಂದಿನ ದಿನಗಳಲ್ಲಿ ತೀವ್ರಗೊಳಿಸಲಾಗುತ್ತದೆ.ಹಾಗೇ ಜನರಲ್ಲಿ ಕೊರೋನಾ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಗರಸಭೇ, ಪೊಲೀಸ್ ಇಲಾಖೆ ಜಂಟಿಯಾಗಿ ದಂಡ ವಿಧಿಸಲಾಗುವುದು ಎಂದಿದ್ದಾರೆ.

ಲಯನ್ಸ್ ಸರ್ಕಲ್ ಬಳಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರೊಂದಿಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ ಉಡುಪಿ ನಗರಸಭೆ ಮತ್ತು ಪೊಲೀಸ್ ಇಲಾಖೆ ವತಿಯಿಂದ ಮಾಸ್ಕ್ ಧರಿಸಿದವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಈ ವೇಳೆ ಉಡುಪಿ ಡಿವೈಎಸ್ಪಿ ಜೈ ಶಂಕರ್,  ನಗರಸಭೆಯ ಪೌರಾಯುಕ್ತ ಆನಂದ ಕಲ್ಲೋಳಿಕರ್, ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply