ನನ್ನ ಕುಟುಂಬ ನನ್ನ ಜವಾಬ್ದಾರಿ ಜಾಗೃತಿ ಸ್ಟಿಕರ್ ಅಳವಡಿಕೆ

ಉಡುಪಿ​:  ಉಡುಪಿ ಜಿಲ್ಲೆಯಲ್ಲಿ ಕೋವಿಡ್ -19 ಕುರಿತು ಪ್ರತೀ ಮನೆ​ ಮನೆಗೆ ಅರಿವು ಮೂಡಿಸಲು ಜಿಲ್ಲಾಡಳಿತ ರೂಪಿಸಿರುವ, “ನನ್ನ ಕುಟುಂಬ ನನ್ ಜವಾಬ್ದಾರಿ” ಅಭಿಯಾನ​ ಕಾರ್ಯಕ್ರಮದ ಸ್ಟಿಕರ್‌ನ್ನು, ಜಿಲ್ಲಾ ನ್ಯಾಯಾಲ ಯದ ಸಮೀಪದ ವಸತಿ ಸಂಕೀರ್ಣದಲ್ಲಿನ ಮನೆಯ ಬಾಗಿಲಿಗೆ,​ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಕಾವೇರಿ ಮತ್ತು​ ಜಿಲ್ಲಾಧಿಕಾರಿ ಜಿ.ಜಗದೀಶ್ ಅಂಟಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಈ ಸ್ಟಿಕರ್‌ನಲ್ಲಿ ಮನೆಯಲ್ಲಿನ ಪ್ರತೀ ಸದಸ್ಯರು ಕೋವಿಡ್ 19 ನಿಂದ ತಮ್ಮ ಕುಟುಂಬವನ್ನು ರಕ್ಷಿಸಲುಪಾಲಿಸ ಬೇಕಾದ ಕೋವಿಡ್-೧೯ ನಿಯಂತ್ರಣಾ ಮುನ್ನೆಚ್ಚರಿಕಾ ಕ್ರಮಗಳು ಮತ್ತು ಕುಟುಂಬದ ಹಿರಿಯ ಸದಸ್ಯರನ್ನುಸೋಂಕಿಗೆ ಒಳಗಾಗದಂತೆ ರಕ್ಷಿಸುತ್ತೇನೆ, ಗರ್ಭಿಣಿ ಮಹಿಳೆಯರನ್ನು ಸೋಂಕಿಗೆ ಒಳಗಾಗದಂತೆ ರಕ್ಷಿಸುತ್ತೇನೆ, ಕುಟುಂಬದ​ ಸದಸ್ಯರಿಗೆ ರೋಗ ಲಕ್ಷಣಗಳಿದ್ದಲ್ಲಿ ಅವರನ್ನು ಪರೀಕ್ಷೆಗೆ ಒಳಪಡಿಸಲು ಬದ್ದನಾಗಿದ್ದೇನೆ, ಕೋವಿಡ್ ೧೯ ಪ್ರಸರಣ​​ ಸರಪಳಿಯನ್ನು ಮೊಟಕುಗೊಳಿಸಲು ನನ್ನ ಕಡೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧ ನಾಗಿದ್ದೇನೆ ಎಂದು ಸಹಿ​ ಮಾಡಿದ ಸ್ವಯಂ ಘೋಷಣಾ ಪ್ರಮಾಣ ಪತ್ರದ ಪ್ರತಿ ಇರುತ್ತದೆ.

ಜಿಲ್ಲೆಯ ಪ್ರತೀ ಮನೆ ಮನೆಗೂ ಈ ಸ್ಟಿಕರ್ ಅಂಟಿಸಿ, ಸಹಿ ಮಾಡಿದ ಸ್ವಯಂ ಘೋಷಣಾ ಪತ್ರವನ್ನು ಪಡೆಯುವಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡಾ, ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ಡಾ. ಪ್ರೇಮಾ ನಂದ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪ್ರೇಮ್ ಸಾಗರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.​ ರೋಷನ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply