ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆ

ಉಡುಪಿ, ಸೆಪ್ಟಂಬರ್ 07 (ಕವಾ) : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರದ ಸೌಲಭ್ಯಗಳು ಸಫಾಯಿ ಕರ್ಮಚಾರಿಯವರಿಗೆ ಸಿಗುವ ರೀತಿಯಲ್ಲಿ ಅವರುಗಳಿಗೆ ಅರಿವು ಮೂಡಿಸಿ, ಫಲಾನುಭವಿಗಳನ್ನಾಗಿಸಿ, ಎಂದ ಅವರು ಮ್ಯಾನ್ಯುವಲ್ ಸ್ಕಾö್ಯವೆಂಜರ್ ವೃತ್ತಿಯಿಂದ ಹೊರ ಬಂದಿರುವವರಿಗೆ ಸೂಕ್ತ ಪುರ್ನವಸತಿ
ಕಲ್ಪಿಸಬೇಕು ಎಂದರು. ಸಕ್ಕಿಂಗ್ ಹಾಗೂ ಜಟ್ಟಿಂಗ್ ಯಂತ್ರ, ವೈಯಕ್ತಿಕವಾಗಿ, ಸಫಾಯಿ ಕರ್ಮಚಾರಿಗಳ ಸ್ವ-ಸಹಾಯ ಗುಂಪುಗಳಿoದ, ಖಾಸಗಿ ಏಜೆನ್ಸಿ ಗುತ್ತಿಗೆದಾರರಿಂದ ಹೊಸ ಯಂತ್ರಗಳನ್ನು ಖರೀದಿ ಮಾಡಲು ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು
ನೀಡಲಾಗುವುದು ಇದರ ಸದುಪಯೋಗ ಪಡೆದುಕೊಳ್ಳಲು ಪ್ರಚಾರಪಡಿಸಬೇಕು ಎಂದರು.
ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಠಿಯಿಂದ ಪ್ರತಿ 3 ತಿಂಗಳಿಗೊಮ್ಮೆ ಸಾಮಾನ್ಯ ಅರೋಗ್ಯ ತಪಾಸಣೆ ಹಾಗೂ ವಾರ್ಷಿಕವಾಗಿ ಎರಡು ಬಾರಿ ಸಂಪೂರ್ಣ ದೇಹ ಪರೀಕ್ಷೆಯನ್ನು ಸ್ಥಳೀಯ ಸಂಸ್ಥೆಗಳು ಕಡ್ಡಾಯವಾಗಿ ಮಾಡಿಸಿ ಎಂದು ಸೂಚನೆ
ನೀಡಿದರು.

ಜಿಲ್ಲೆಯಲ್ಲಿ ತ್ಯಾಜ್ಯ ನಿರ್ವಹಣೆ ಸೇರಿದಂತೆ ಮತ್ತಿತರೆ ಕಾರ್ಯಗಳಿಗೆ ಹೊರಗುತ್ತಿಗೆ ಮೂಲಕ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಸಮಸ್ಯೆಗಳನ್ನು ಆಗಿಂದ್ದಾಗೆ ಚರ್ಚಿಸಿ ಬಗೆಹರಿಸಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಜಾಗೃತ ಸಮಿತಿ ಸದಸ್ಯರುಗಳಾದ ವೈ.ಲಕ್ಷö್ಮಣ್, ಗಣೇಶ್, ಅನಿತಾ, ಹಾಗೂ ಎಲ್ಲಾ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply