ಶೇ. 50 ರಷ್ಟು ಕಾನೂನು ಸಿಬ್ಬಂದಿಗಳು ಮಾತ್ರ ಕರ್ತವ್ಯ ನಿರ್ವಹಿಸಲು ಅವಕಾಶ- ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ:ಕೊರೋನಾ ತೀವ್ರವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಹೊರಡಿಸಲಾದ ಸರಕಾರದ ಆದೇಶದಲ್ಲಿ ಕೆಲವು ಅಂಶಗಳನ್ನು ಸೇರ್ಪಡೆ ಮತ್ತು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

ನ್ಯಾಯಾಲಯದ ಕೆಲಸದ ದಿನಗಳಲ್ಲಿ ಮಾತ್ರ ವಕೀಲರು, ಅವರ ಕಾನೂನು ಸಿಬ್ಬಂದಿ, ಗುಮಾಸ್ತರು ಹಾಗೂ ಇತರ ಸಹಾಯಕ ಸಿಬ್ಬಂದಿಯವರು ಆಯಾ ಕಚೇರಿಗಳಲ್ಲಿ ನೀಡುವ ಗುರುತಿನ ಚೀಟಿಯೊಂದಿಗೆ ಸಂಚರಿಸಲು ಅನುಮತಿಯಿದೆ. ಉಳಿದಂತೆ ಜನರ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿರುತ್ತದೆ.ವಕೀಲರ ಕಛೇರಿಗಳಲ್ಲಿ ಹಾಗೂ ಕಾನೂನು ಸಂಸ್ಥೆಗಳಲ್ಲಿ ಶೇ. 50 ರಷ್ಟು ಸಿಬ್ಬಂದಿಗಳು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ.ಎಲ್ಲಾ ರೀತಿಯ ಹೋಮ್ ಡೆಲಿವರಿ ಮತ್ತು ಇ-ಕಾಮರ್ಸ್ ಸೇವೆಗಳಿಗೆ ಅನುಮತಿ ನೀಡಲಾಗಿರುತ್ತದೆ.

ಈ ಆದೇಶಗಳನ್ನು ಪಾಲಿಸದೇ ಇರುವವರ ವಿರುದ್ಧ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, ವಿಪತ್ತು ನಿರ್ವಹಣಾ ಕಾಯ್ದೆ 2005, ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಕಾಯ್ದೆ 2020 ಮತ್ತು ಐ.ಪಿ.ಸಿ ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply