ಗಂಭೀರವಾಗಿ ಮನೆಯಿಂದ ನೇರ ವೆಂಟಿಲೇಟರ್ ಗೆ ಬಂದರೆ ಬೆಡ್ ಕೊಡಲ್ಲ ಎಂದ ಉಡುಪಿ ಡಿ.ಸಿ

ಉಡುಪಿ: ಆಮ್ಲಜನಕ ಕೊಡುವುದಕ್ಕೆ ಸರಕಾರ ಬದ್ಧವಿದೆ.ಜಿಲ್ಲೆಯಲ್ಲಿ ಆಕ್ಸಿಜನ್ ಬೆಡ್ ಗಳು ಸಾಕಷ್ಟು ಇವೆ.ವೆಂಟಿಲೇಟರ್ ಚಿಕಿತ್ಸೆ ಕೊಡಲು ನಮ್ಮಲ್ಲಿ ಅವಕಾಶವಿದೆ.ಆದರೆ ಮನೆಯಿಂದ ನೇರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಬರುವವರಿಗೆ ವೆಂಟಿಲೇಟರ್ ಕೊಡುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಜನರ ನಿರ್ಲಕ್ಷಕ್ಕೆ ನಾವು ಜವಾಬ್ದಾರರಲ್ಲ , ಎಷ್ಟು ವೆಂಟಿಲೇಟರ್ ತಯಾರು ಮಾಡಿದರೂ ಸಾಕಾಗದ ಸ್ಥಿತಿ ಎದುರಾಗಿದೆ.ರೋಗ ಲಕ್ಷಣ ಕಂಡು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಿ. ಆರಂಭದಲ್ಲಿ ಆಕ್ಸಿಜನ್ ಕೊಟ್ಟು ಜೀವ ಉಳಿಸುವ ಅವಕಾಶ ಇದೆ. ಗಂಭೀರ ಆದಲ್ಲಿ ಐಸಿಯು, ವೆಂಟಿಲೇಟರ್ ಗೆ ಶಿಫ್ಟ್ ಮಾಡುತ್ತೇವೆ. ನನಗೆ ವೆಂಟಿಲೇಟರ್ ಕೊಡುತ್ತೀರಾ ಎಂದು ಮನೆಯಿಂದ ಫೋನ್ ಮಾಡಬೇಡಿ, ಜನತೆಗೆ ಈ ನಿರ್ಲಕ್ಷದ ಬುದ್ಧಿ ಹೋಗಬೇಕು. ಬುದ್ಧಿವಂತರ ಜಿಲ್ಲೆಯವರು ಜವಾಬ್ದಾರಿಯಿಂದ ವರ್ತಿಸಿ ಎಂದು ಹೇಳಿದ್ದಾರೆ.

ನಿಮ್ಮ ಜೀವದ ಜೊತೆ ನೀವೇ ಆಟವಾಡುತ್ತಿದ್ದೀರಿ ಎಂದು ಕೊರೋನಾ ನಿರ್ಲಕ್ಷಿಸುವವರ ವಿರುದ್ಧ ಉಡುಪಿ ಡಿಸಿ ಗರಂ ಆದ ಅವರು, ಉಡುಪಿಯಲ್ಲಿ 950 ಹೆಚ್ಚು ಆಕ್ಸಿಜನ್ ಬೆಡ್ ಖಾಲಿಯಿವೆ. ಉಡುಪಿಯಲ್ಲಿ ಕೊರೊನಾ ಸೋಂಕು ವಿಪರೀತ ಹೆಚ್ಚಳವಾಗುತ್ತಿದೆ. ಜ್ವರ ಶೀತ ಕೆಮ್ಮು ನೆಗಡಿ ಎಂದು ಜನ ನಿರ್ಲಕ್ಷ ಮಾಡುತ್ತಿದ್ದಾರೆ.ಜನರು ಆಕ್ಸಿಜನ್ ಬೆಡ್ ಇಲ್ಲ ಎಂದು ಪ್ಯಾನಿಕ್ ಆಗದಿರಿ,ಆದರೆ ಆಸ್ಪತ್ರೆಯ ಅಗತ್ಯ ಇಲ್ಲದವರು ಬೆಡ್ ಹುಡುಕುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

 
 
 
 
 
 
 
 
 

Leave a Reply