ಕಲ್ಸಂಕ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

 ಉಡುಪಿಯ ಕಲ್ಸಂಕ ಜಂಕ್ಷನ್ ಬಳಿ ಇರುವ ಕನಕಮಾಲ್‌ನ ಪಾಳು ಬಿದ್ದ ಕಟ್ಟಡದ ಪಾರ್ಕಿಂಗ್ ಸ್ಥಳದಲ್ಲಿ ಏಪ್ರಿಲ್ 3 ರಂದು ಸುಮಾರು 35-40 ವರ್ಷ ಪ್ರಾಯದ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುತ್ತದೆ.

ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ನಗರ ಠಾಣೆಯ ಪಿ.ಎಸ್.ಐ ಮೊ.ನಂ: 9480805445 ಅಥವಾ ದೂ.ಸಂಖ್ಯೆ: 0820-2520444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply