ಹುತಾತ್ಮ ವೀರ ಯೋಧರಿಗೆ ಶ್ರದ್ಧಾಂಜಲಿ

ಉಡುಪಿ: ಉದ್ಯಾವರ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಛತ್ತೀಸ್ ಗಡ ದಲ್ಲಿ ನಕ್ಸಲರ ಷಡ್ಯಂತ್ರದಿಂದ ಹುತಾತ್ಮರಾದ 22 ವೀರ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಮೀನುಗಾರಿಕಾ ಪ್ರಕೋಷ್ಠದ ಸಂಚಾಲಕ ಯಶ್ ಪಾಲ್ ಸುವರ್ಣ ಭಾಗವಹಿಸಿ ನುಡಿ ನಮನ ಸಲ್ಲಿಸಿದರು.

ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ಉದ್ಯಾವರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀ ರವಿ ಕೋಟ್ಯಾನ್, ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ರಾಧಕೃಷ್ಣ ಶ್ರೀಯಾನ್, ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply