ಉಚಿತ ಕೋವಿಡ್ ಲಸಿಕಾ ಅಭಿಯಾನ ಉದ್ಘಾಟಿಸಿದ ಶಾಸಕ ರಘುಪತಿ ಭಟ್ 

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ನಗರದ ಆಶ್ರಯದಲ್ಲಿ ಕೆ.ಎಂ.ಸಿ. ಆಸ್ಪತ್ರೆ ಮಣಿಪಾಲದ ಸಹಭಾಗಿತ್ವದಲ್ಲಿ “ಉಚಿತ ಕೋವಿಡ್ ಲಸಿಕಾ ಅಭಿಯಾನ” ವನ್ನು ಇಂದು ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಉದ್ಘಾಟಿಸಿದರು.

ಬಿಜೆಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆ ವಹಿಸಿದ್ದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, , ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್, ಸ್ಥಳೀಯ ನಗರಸಭಾ ಸದಸ್ಯೆ ವಿಜಯಲಕ್ಷ್ಮಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್, ನಗರ ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಸಂಚಾಲಕರಾದ ಉಜ್ವಲಾ ಕಿರಣ್ ಹಾಗೂ ಡಾ. ಪದ್ಮನಾಭ ಹೆಗ್ಡೆ ಉಪ ವೈದ್ಯಕೀಯ ಅಧೀಕ್ಷಕರು, ಡಾ. ಉತ್ತಮ್ ಶರ್ಮಾ ಲಸಿಕಾ ಕೇಂದ್ರದ ಮುಖ್ಯಸ್ಥರು, ಕೆ.ಎಸ್ ಜಯ ವಿಠ್ಠಲ್ ಮಾಹೆ ಹಿರಿಯ ಅಧಿಕಾರಿ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply