ನೋಡ ನೋಡುತ್ತಲೇ ಹೊತ್ತಿ ಉರಿದ ಕಾರು! ಪ್ರಯಾಣಿಕರು ಅಪಾಯದಿಂದ ಪಾರು

ರೆನಾಲ್ಟ್‌ ಡಸ್ಟರ್ ಕಾರು ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದು ಭಸ್ಮಗೊಂಡ ಘಟನೆ ಬಂಟ್ವಾಳ- ಮೂಡುಬಿದಿರೆ ರಸ್ತೆಯ ರಾಯಿ ಬಳಿಯ ಕುದ್ಕೋಳಿ ಎಂಬಲ್ಲಿ ನಡೆದಿದೆ. 

ಸೋಮವಾರ ಬೆಳಗ್ಗೆ ರಸ್ತೆಯಲ್ಲಿ ಸಾಗುತ್ತಿದ್ದ ಕಾರಿನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿತ್ತು. ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಇಳಿದು ಅಪಾಯದಿಂದ ಪಾರಾಗಿದ್ದಾರೆ. ಆದರೆ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಘಟನೆಯಿಂದ ಸುಮಾರು ಒಂದು ತಾಸುಗಳ ಕಾಲ ಬಂಟ್ವಾಳ- ಮೂಡುಬಿದಿರೆ ರಸ್ತೆ ಬ್ಲಾಕ್ ಆಗಿತ್ತು.

ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಅವರಿಗೆ ಸೇರಿದ ಕಾರು ಇದಾಗಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ವೇಳೆ ಕಾರು ಬ್ರೇಕ್ ಹಾಕಿದರೂ ನಿಲ್ಲದೇ ಇದ್ದು, ಬಳಿಕ ಚಾಲಕನ ಸಮಯ ಪ್ರಜ್ಞೆಯಿಂದ ಕಾರು ನಿಂತಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದು, ಯಾರಿಗೂ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

 
 
 
 
 
 
 
 
 
 
 

Leave a Reply