ಉಡುಪಿ ಮೀನು ಮಾರುಕಟ್ಟೆಯಲ್ಲಿ ಮಾತ್ರ ಮೀನು ಮಾರಾಟ ಅನುಮತಿ 

ಉಡುಪಿ: ಉಡುಪಿಯಲ್ಲಿ ಮೀನು ಮಾರಾಟ ಮಾಡಲು ನಗರಸಭಾ ವ್ಯಾಪ್ತಿಯಲ್ಲಿ ಸುಸಜ್ಜಿತವಾದ ಮೀನು ಮಾರುಕಟ್ಟೆ ಇದೆ. ಆದರೆ ಇತ್ತೀಚೆಗೆ ಅನಧಿಕೃತವಾಗಿ ರಸ್ತೆ ಬದಿಯಲ್ಲಿ ಮತ್ತು ದ್ವಿ ಚಕ್ರ ವಾಹನಗಳಲ್ಲಿ ಮೀನು ಮಾರಾಟ ನಡೆಸುತ್ತಿರು ವುದು ಕಂಡು ಬಂದಿದೆ.

ಈಗಾಗಲೇ ಈ ಕುರಿತು ಮೀನು ಮಾರಾಟದ ಮಹಿಳೆಯರು ಮತ್ತು ಸಾರ್ವಜನಿಕರು ದೂರು ನೀಡಿದ್ದಾರೆ.
ಹಾಗಾಗಿ ಇನ್ನು ಮುಂದೆ ಮೀನು ಮಾರುಕಟ್ಟೆಯಲ್ಲಿ ಅಲ್ಲದೆ ಬೇರೆ ಯಾವುದೇ ಸ್ಥಳಗಳಲ್ಲಿ ಮೀನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

ರಸ್ತೆ ಬದಿಯಲ್ಲಿ ಹಾಗೂ ವಾಹನಗಳಲ್ಲಿ ಮೀನು ಮಾರಾಟ ಮಾಡುವುದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳ ಲಾಗುವು ಎಂದು ಉಡುಪಿ ನಗರಸಭೆ ಪೌರಾಯುಕ್ತರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 
 
 
 
 
 
 
 
 
 
 

Leave a Reply