“ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ”

ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸಾಧನೆಯನ್ನುಮಾಡಿರುವ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಎ.ಪಿ ಭಟ್ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಸುರೇಶ್ ಮರಕಾಲ ಇವರನ್ನುಸನ್ಮಾನಿಸಲಾಯಿತು.

ನಂತರ ಮಾತನಾಡಿದ ಸನ್ಮಾನಿತರು ವಿದ್ಯಾರ್ಥಿಗಳ ಭವಿಷ್ಯವನ್ನುರೂಪಿಸುವಲ್ಲಿ ಶಿಕ್ಷಕರ ಪಾತ್ರದ ಕುರಿತು ಬೆಳಕು ಚೆಲ್ಲಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಭಾಸ್ಕರ್ ಶೆಟ್ಟಿ ಎಸ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಂತರಿಕಗುಣಮಟ್ಟ ಭರವಸೆ ಕೋಶದ ಸಂಚಾಲಕರಾದ ಪ್ರೊ. ಸೋಜನ್ ಕೆ.ಜಿ ಸ್ವಾಗತಿಸಿದರು ಹಾಗೂ ಪ್ರಾಣಿಶಾಸ್ರ ವಿಭಾಗದ ಮುಖ್ಯಸ್ಥರಾದ  ಕೇಶವ ಮೂರ್ತಿ ಎಂ.ವಿ ವಂದಿಸಿದರು.

ಕಾಲೇಜಿನ ಅಧ್ಯಾಪಕರ ಸಂಘದ ಕಾರ್ಯದರ್ಶಿಯಾದ ಶ್ರೀ ರಮಕಾಂತ ಪುರಾಣಿಕ ಹೆಚ್‌ ಸನ್ಮಾನ್ಯರನ್ನು ಪರಿಚಯಿಸಿದರು ಹಾಗೂ ರಾಜ್ಯಶಾಸ್ರ ವಿಭಾಗದ ನಿತ್ಯಾನಂದ ಎನ್‌  ನಿರೂಪಿಸಿದರು.  ಸಭಾ ಅಫ್ರೀನ್ ಪ್ರಾರ್ಥಿಸಿದರು.

Leave a Reply