ಭ್ರಷ್ಟಾಚಾರ ವಿರುದ್ಧ ಜಾಗೃತಿ

ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಸ್ವಯಂ ಪ್ರೇರಣೆಯಿಂದ ನಾವು ಪಾಲ್ಗೊಳ್ಳಬೇಕು. ಈ ನಿಟ್ಟಿನಲ್ಲಿ ಕಾನೂನಿನ ಅರಿವನ್ನು ಕೂಡ ಹೊಂದಿರಬೇಕು ಎಂದು ಕರಾವಳಿ ಪೊಲೀಸ್ ಠಾಣೆ ಗಂಗೊಳ್ಳಿ ಪಿಎಸ್ಐ ವಿಜಯ ಅಮೀನ್ ಆರ್ ಹೇಳಿದರು.
ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಕರಾವಳಿ ಕಾವಲು ಪೊಲೀಸ್ ಠಾಣೆ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ನಡೆದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ನಡೆದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಥಾಮಸ್ ಪಿ.ಎ ಮಾತನಾಡಿ, ಭ್ರಷ್ಟಾಚಾರ ನಿರ್ಮೂಲನೆ ಎನ್ನುವಂತದ್ದು ನಮ್ಮ ನಮ್ಮ ಮನೆ ಮನಗಳಿಂದಲೇ ಪ್ರಾರಂಭವಾಗಬೇಕಾಗಿದೆ. ಕೆಟ್ಟದ್ದನ್ನು ವಿರೋಧಿಸುವುದರ ಜೊತೆಗೆ ಕೆಟ್ಟದ್ದನ್ನು ಮಾಡದಿರುವುದು ಮುಖ್ಯ ಎಂದು ಅವರು ಅಭಿಪ್ರಾಯ ಪಟ್ಟರು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷೆ ಸುಗುಣ ಆರ್. ಕೆ, ಎನ್ಎಸ್ಎಸ್ ವಿದ್ಯಾರ್ಥಿ ಪ್ರತಿನಿಧಿ ಶ್ರೇಯ ಖಾರ್ವಿ, ಕರಾವಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಉದಯ ಗೌಡ ಮೊದಲಾದವರು ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿದರು.

 
 
 
 
 
 
 
 
 
 
 

Leave a Reply