ಬ್ರಹ್ಮಾವರ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಬ್ರಹ್ಮಾವರ: ಕಾರಿನಲ್ಲಿ ಕುಳಿತು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಉಡುಪಿ ಜಿಲ್ಲಾ ಸೆನ್ ಅಪರಾಧ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತರನ್ನು ಶಿವಮೊಗ್ಗ ಜಿಲ್ಲೆ ಹೊಸನಗರದ ಆಸಿಫ್ ಬಾಷಾ (38) ಮತ್ತು ರಿಯಾಜ್ (29) ಎಂದು ಗುರುತಿಸಲಾಗಿದೆ. ಗುರುವಾರ ಸೆನ್ ಅಪರಾಧ ಪೊಲೀಸ್ ಠಾಣೆ ಉಡುಪಿ ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ಇವರಿಗೆ ದೊರೆತ ಮಾಹಿತಿಯ ಮೇರೆಗೆ ಬ್ರಹ್ಮಾವರ ತಾಲೂಕು, ವಾರಂಬಳ್ಳಿಗ್ರಾಮದ ಧರ್ಮಾವರಂ ಆಡಿಟೋರಿಯಂನ ಬಳಿಯ ಸಾರ್ವಜನಿಕ ಸ್ಥಳಕ್ಕೆ ದಾಳಿ ನಡೆಸಿ ಅಲ್ಲಿ ಕಾರಿನಲ್ಲಿ ಕುಳಿತುಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ಯಾವುದೇ ಪರವಾನಿಗೆ ಇಲ್ಲದೇ, ಕಾನೂನು ಬಾಹಿರವಾಗಿ ಮಾರಾಟ ಮಾಡಲು ಹೊಂದಿದ್ದ 60,000/- ಮೌಲ್ಯದ 2ಕಿಲೋ, 038 ಗ್ರಾಂ ತೂಕದ ಗಾಂಜಾವನ್ನು ಅಂದಾಜು ರೂಪಾಯಿ 3,500/- ಬೆಲೆಬಾಳುವ 2 ಮೊಬೈಲ್ ಹ್ಯಾಂಡ್ ಸೆಟ್ಗಳನ್ನು ಅಂದಾಜು ರೂಪಾಯಿ 2,50,000/- ಮೌಲ್ಯದ ಮಾರುತಿ ಡಿಝಾಯರ್ ಕಾರು-1ನ್ನು ವಶಪಡಿಸಿಕೊಂಡಿದ್ದಾರೆ. ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂಪಾಯಿ 3,13,500/- ಆಗಿರುತ್ತದೆ. ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Leave a Reply