ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಹುತಾತ್ಮರಾದ ಜನರಲ್ ಬಿಪಿನ್ ರಾವತ್ ಗೆ ಗೌರವ ನಮನ

ಉಡುಪಿ : ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಹುತಾತ್ಮರಾದ ಸಿ.ಡಿ.ಎಸ್ ಜನರಲ್ ಬಿಪಿನ್ ರಾವತ್ ಗೆ ಉಡುಪಿ ಅಜ್ಜರಕಾಡು ಹುತಾತ್ಮ ಸೈನಿಕರ ಯುದ್ಧ ಸ್ಮಾರಕದಲ್ಲಿ ಶಾಸಕ ಕೆ ರಘುಪತಿ ಭಟ್ ಗೌರವ ನಮನ ಸಲ್ಲಿಸಿದರು.

ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಸಿಸ್ಟರ್ ಪ್ರೀತಿ ಕ್ರಾಸ್ತಾ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply