ಮಂಗಳೂರು ಗೋಲಿಬಾರ್ ಪ್ರಕರಣ ವಿಚಾರಣೆ ಅಂತಿಮ ಹಂತಕ್ಕೆ 

ಮಂಗಳೂರು: ಮಂಗಳೂರು ನಗರದಲ್ಲಿ 2019ರ ಡಿ.19ರಂದು ನಡೆದ ಪ್ರತಿಭಟನೆಯ ವೇಳೆ ಗುಂಡೇಟಿನಿಂದ ನೌಶಿನ್ ಹಾಗೂ ಜಲೀಲ್ ಕುದ್ರೋಳಿ ಎಂಬವರು ಮೃತಪಟ್ಟಿರುವ ಬಗ್ಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ಉಡುಪಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದ್ದು, ಅದರಂತೆ ಹಲವರ ವಿಚಾರಣೆ, ಸಾಕ್ಷ್ಯ ಹೇಳಿಕೆಗಳನ್ನು ದಾಖಲಿಸ ಲಾಗಿದೆ.

ಈ ಘಟನೆಯ ಬಗ್ಗೆ ಮಾಹಿತಿ ಅಥವಾ ಈ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದ ಯಾವುದೇ ವ್ಯಕ್ತಿಗಳು ಸೆಪ್ಪೆಂಬರ್ 1ರಂದು ಗಂಟೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಹಾಯಕ ಆಯುಕ್ತರ ಕೋರ್ಟ್ ಹಾಲ್, ಮಿನಿವಿಧಾನ ಸೌಧ ಮಂಗಳೂರು ಹಾಜರಾಗಿ ಸಾಕ್ಷ್ಯ ಅಥವಾ ಹೇಳಿಕೆಯನ್ನು ನೀಡಲು ಅಂತಿಮ ಅವಕಾಶವನ್ನು ನೀಡಲಾಗಿದೆ. ತದನಂತರ ಸಾರ್ವಜನಿಕರಿಂದ ಯಾವುದೇ ಸಾಕ್ಷ್ಯ ಅಥವಾ ಹೇಳಿಕೆಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಉಡುಪಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply