ಉಡುಪಿ ಬಾಲಕಿಯರ ಪ್ರೌಢಶಾಲೆಯಲ್ಲಿ ಗೂಡುದೀಪ ಸ್ಪರ್ಧೆ

ಉಡುಪಿ ಬಾಲಕಿಯರ ಪ್ರೌಢಶಾಲೆಯಲ್ಲಿ ಅಕ್ಟೋಬರ್ 30 ರಂದು ಬರುವ ದೀಪಾವಳಿಯ ಪ್ರಯುಕ್ತ ಗೂಡುದೀಪ ಸ್ಪರ್ಧೆ ನಡೆಯಿತು. ಸುಮಾರು 26 ಮಕ್ಕಳ ತಂಡ ಸ್ಪರ್ಧೆಯಲ್ಲಿ ಭಾಗವಹಿಸಿದರು. ಮಕ್ಕಳಲ್ಲಿ ಹಬ್ಬಗಳ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಅವರಲ್ಲಿ ಸೃಜನಾತ್ಮಕ ಕಲೆಯನ್ನು ಬೆಳೆಸುವ ಉದ್ದೇಶದಿಂದ ಮತ್ತು ಮಿತವಾದ ಖರ್ಚಿನಲ್ಲಿ ಸಾಂಪ್ರದಾಯಿಕ ಗೂಡು ದೀಪಗಳನ್ನು ರಚಿಸಲು ಕಲಿಯಬೇಕೆಂಬ ಸದುದ್ದೇಶದಿಂದ ಈ ಸ್ಪರ್ಧೆಯನ್ನು ಡಾ. ಉಪಾಧ್ಯಾಯ ಮೂಡುಬೆಳ್ಳೆ ಆಯೋಜಿಸಿದರು. ವಿಜೇತರಿಗೆ ನಗದು ಬಹುಮಾನ ನೀಡಿ ಸರಕಾರಿ ಶಾಲೆಯ ಹೆಣ್ಣು ಮಕ್ಕಳಿಗೆ ಇದೊಂದು ಪ್ರೋತ್ಸಾಹಿಸಿದರು.

 
 
 
 
 
 
 
 
 
 
 

Leave a Reply