ಉಡುಪಿಯಲ್ಲಿ ಲಾಕ್ ಡೌನ್ ಆಗಿರುವ ಗ್ರಾಪಂ ವ್ಯಾಪ್ತಿಯಲ್ಲಿ ಜೂನ್ 7,8ರಂದು ಬೆಳಿಗ್ಗೆ 6- 10 ರ ವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ

ಉಡುಪಿ: 50 ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳಿರುವ ಹಿನ್ನೆಲೆ ಲಾಕ್ ಡೌನ್ ಮಾಡಲಾಗಿರುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅಗತ್ಯ ಸಾಮಾಗ್ರಿಗಳನ್ನು ಖರೀದಿಸಲು ಜೂನ್ 7 ಮತ್ತು 8 ರಂದು ಬೆಳಿಗ್ಗೆ 6 ರಿಂದ 10 ರ ವರೆಗೆ ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಆದೇಶಿಸಿದ್ದಾರೆ.

ಈಗಾಗಲೇ ಸಂಪೂರ್ಣವಾಗಿ ಲಾಕ್‌ಡೌನ್ ಆದೇಶ ಮಾಡಲಾಗಿರುವ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿರುವ ಸಾರ್ವಜನಿಕರು ಜೂನ್ 7 ಮತ್ತು 8 ರಂದು ಪೂರ್ವಾಹ್ನ 6 ರಿಂದ ಪೂರ್ವಾಹ್ನ 10 ಗಂಟೆಯ ವರೆಗೆ ತಮಗೆ ಅಗತ್ಯವಾಗಿ ಬೇಕಾಗಿರುವ ಆಹಾರ ಸಾಮಾಗ್ರಿಗಳನ್ನು ಖರೀದಿ ಮಾಡಲು ಅನುಕೂಲವಾಗುವಂತೆ ವಿನಾಯಿತಿ ನೀಡಲಾಗಿರುತ್ತದೆ. ಈ ಗ್ರಾಮ ಪಂಚಾಯತ್‌ಗಳಲ್ಲಿ ಲಾಕ್‌ಡೌನ್‌ನ್ನು ಮುಂದುವರೆಸುವುದೇ ಅಥವಾ ಬೇಡವೇ ಎಂಬ ಕುರಿತು ಜೂನ್ 8 ರಂದು ನಿರ್ಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply