ಗ್ರಾಮ ಪಂಚಾಯತ್ ಚುನಾವಣೆಗಳ ಪೂರ್ವ ತಯಾರಿ

ಮುಂಬರಲಿರುವ ಗ್ರಾಮ ಪಂಚಾಯತ್ ಚುನಾವಣೆಗಳ ಪೂರ್ವ ತಯಾರಿಯಲ್ಲಿ ತೊಡಗಿಸಿಕೊಂಡು ಗರಿಷ್ಠ ಗೆಲುವಿನ ಗುರಿಯೊಂದಿಗೆ ಚುನಾವಣೆಗೆ ಸನ್ನದ್ಧರಾಗಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಶನಿವಾರದಂದು ನಡೆದ ಪಂಚಾಯತ್ ರಾಜ್ ಗ್ರಾಮೀಣ ಪ್ರಕೋಷ್ಠದ ಜಿಲ್ಲಾ ಮತ್ತು ಮಂಡಲ ಸಂಚಾಲಕರ ಸಭೆಯ ಅದ್ಯಕ್ಷತೆಯನ್ನುವಹಿಸಿ  ಮಾತನಾಡಿದರು.

ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಜಿಲ್ಲೆಯ ಎಲ್ಲಾ158 ಗ್ರಾಮ ಪಂಚಾಯತ್‌ಗಳಲ್ಲೂ ಬಿಜೆಪಿ ಜಯಬೇರಿಗಳಿಸುವ ಮೂಲಕ ಪಂಚಾಯತ್ ಸ್ತರದಲ್ಲಿಯೂ ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತವಾಗಿಸುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಪಂಚಾಯತ್ ರಾಜ್ ಗ್ರಾಮೀಣ ಪ್ರಕೋಷ್ಠದ ಜಿಲ್ಲಾ ಸಂಚಾಲಕರು ಎಲ್ಲಾ ಮಂಡಲಗಳಿಗೆ ತಮ್ಮ ತಂಡದ ಪ್ರವಾಸವನ್ನು15 ದಿನಗಳೊಳಗೆ ಪೂರ್ಣಗೊಳಿ ಸಬೇಕು. ಪ್ರಕೋಷ್ಠದ ಜೊತೆಗೆ ಗ್ರಾಮ ಪಂಚಾಯತ್ ಮಟ್ಟದ ಪ್ರಮುಖರು ಮತ್ತು ಪಕ್ಷದ ವಿವಿಧ ಸ್ತರಗಳ ಪದಾಧಿಕಾರಿಗಳು, ಜನ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಂಘಟಿತ ಪ್ರಯತ್ನದಿಂದ ನಿಗದಿತ ಗುರಿಯನ್ನು ತಲುಪಲು ಶ್ರಮಿಸಬೇಕು ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಪಂಚಾಯತ್ ರಾಜ್ ಗ್ರಾಮೀಣ ಪ್ರಕೋಷ್ಠವು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಚಟುವಟಿಕೆಗಳ ಸಮಗ್ರ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಹಾಗೂ ಪ್ರಕೋಷ್ಠದ ಮಂಡಲ ಸಂಚಾಲಕರು, ಸಹ ಸಂಚಾಲಕರು ಉಪಸ್ಥಿತರಿದ್ದರು. ಪಂಚಾಯತ್ ರಾಜ್ ಗ್ರಾಮೀಣ ಪ್ರಕೋಷ್ಠದ ಜಿಲ್ಲಾ ಸಂಚಾಲಕ ರಾಜೀವ ಕುಲಾಲ್ ಸ್ವಾಗತಿಸಿ, ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕ ಶ್ರೀನಿವಾಸ ಶರ್ಮ ವಂದಿಸಿದರು.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply