ಇಲ್ಲಿ ಇಲ್ಲ ರಾಜಕೀಯದ ತಡೆಗೋಡೆ… ರಘುಪತಿ ಪ್ರಮೋದ್ ಜೋಡಿ ಭೂಮಿ ಹಸಿರಾಗಿಸುವ ಕಡೆ…

ಹಡಿಲು ಭೂಮಿ ಕೃಷಿ ಆಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 20 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಉಪ್ಪೂರು ಅಮ್ಮುಂಜೆ ಚೌಂಡಿ ನಾಗಬನದ ಬಳಿ 15 ಎಕರೆ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಲಾಯಿತು.

ಕೊಳಲಗಿರಿ ಚರ್ಚ್ ಧರ್ಮ ಗುರುಗಳಾದ ಪ್ರಕಾಶ್ ಅನಿಲ್ ಕಾಸ್ತಲಿನೊ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರೊಂದಿಗೆ ಶಾಸಕ ಕೆ. ರಘುಪತಿ ಭಟ್ ಭೂಮಿಗೆ ಹಾಲನ್ನು ಅರ್ಪಿಸಿ ಬಳಿಕ ನೇಜಿ ನೆಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಉಪ್ಪೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಿದ್ಯಾ ಆಚಾರ್, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ಕೆ. ರಾಘವೇಂದ್ರ ಕಿಣಿ, ಸದಸ್ಯರಾದ ದಿನಕರ್ ಬಾಬು, ಪ್ರತಾಪ್ ಹೆಗ್ಡೆ ಮಾರಾಳಿ, ಮಹೇಶ್ ಠಾಕೂರ್, ಬಿರ್ತಿ ರಾಜೇಶ್ ಶೆಟ್ಟಿ, 
 
ಕೊಳಲಗಿರಿ ವಾರ್ಡ್ ಸದಸ್ಯ ಅಶ್ವಿನ್, ಸತೀಶ್, ರಾಜಶ್ರೀ, ಉಪ್ಪೂರು ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಸದಸ್ಯರು ಹಾಗೂ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್ ಮುಂತಾದವರು ಉಪಸ್ಥಿತರಿದ್ದರು.​
 
 
 
 
 
 
 
 
 
 
 

Leave a Reply