ಹಡಿಲು ಭೂಮಿ ಕೃಷಿ ನಾಟಿಗೆ ಕೃಷಿ ಸಚಿವರೊಂದಿಗೆ ಶಾಸಕ ರಘುಪತಿ ಭಟ್ ಚಾಲನೆ

ಉಡುಪಿ: ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಮೂಡಬೆಟ್ಟು ವಾರ್ಡಿನಲ್ಲಿ ಸುಮಾರು 70 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಇಂದು ಬಾವಲಿ ಮನೆ ರಸ್ತೆಯ ಮಾಧವ ಆಚಾರ್ಯರ ಮನೆ ಬಳಿಯ 30 ಎಕರೆ ಹಡಿಲು ಭೂಮಿ ಕೃಷಿಯ ಯಂತ್ರ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಕೃಷಿ ಸಚಿವ ಬಿ.ಸಿ ಪಾಟೀಲ್ ಜೊತೆಗೆ ಶಾಸಕ ಕೆ. ರಘುಪತಿ ಭಟ್ ಭೂ ಮಾತೆಗೆ ಹಾಲನ್ನು ಅರ್ಪಿಸಿ ನಾಟಿ ಯಂತ್ರ ಚಲಾಯಿಸುವ ಮೂಲಕ ಚಾಲನೆ ನೀಡಿದರು.ಈ ಭಾಗದಲ್ಲಿ ಹಡಿಲು ಭೂಮಿ ಕೃಷಿ ಆಂದೋಲನಕ್ಕೆ ಸಹಕರಿಸಿ ನಿರಂತರವಾಗಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡ ಸಂಘ – ಸಂಸ್ಥೆಯವರಿಗೆ, ಭೂ ಮಾಲಕರಿಗೆ, ಕೃಷಿಕರಿಗೆ, ಸ್ಥಳೀಯರಿಗೆ ಶಾಸಕರು ಕೃತಜ್ಞತೆ ಸಲ್ಲಿಸಿದ್ದಾರೆ.

ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರಸಭಾ ಸದಸ್ಯ ಶ್ರೀಶ ಕೊಡವೂರು, ಬಾಲಕೃಷ್ಣ ಶೆಟ್ಟಿ, ಸ್ಥಳೀಯ ಪ್ರಕಾಶ್, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ,ಮತ್ತು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಉಪ ನಿರ್ದೇಶಕ ಸೂರ್ಯಕಾಂತ ಬಿರಾದಾರ್, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಮುಖ್ಯಸ್ಥ ಡಾ.ಬಿ ಧನಂಜಯ್, ಸಹ ಸಂಶೋಧನಾ ನಿರ್ದೇಶಕ ಲಕ್ಷ್ಮಣ್,ಹಿರಿಯ ಕ್ಷೇತ್ರ ಅಧಿಕಾರಿ ಶಂಕರ್, ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು, ಕೃಷಿಕರು, ಭೂ ಮಾಲಕರು, ಪ್ರಮುಖರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply