ಬನ್ನಂಜೆ ಬಾಬು ಅಮೀನ್ ರಿಂದ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

ಉಡುಪಿ: ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಬನ್ನಂಜೆ ವಾರ್ಡಿನಲ್ಲಿ ಸುಮಾರು 10 ಎಕರೆ ಮತ್ತು ಸ್ಥಳೀಯ ಕೃಷಿಕರ ಮೂಲಕ 1 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಗುರುವಾರ ಬನ್ನಂಜೆ ವಾರ್ಡಿನ ಮೂಡನಿಡಂಬೂರು ಗರಡಿ 1ನೇ ಅಡ್ಡರಸ್ತೆ ಬಳಿ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ತುಳು ಜ್ಞಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಹಾಗೂ ಸಾಯಿ ರಾಧಾ ಗ್ರೂಪ್ ನ ವ್ಯವಸ್ಥಾಪಕ ನಿರ್ದೇಶಕ ಮನೋಹರ್ ಶೆಟ್ಟಿ ಯೊಂದಿಗೆ ಶಾಸಕ ಕೆ. ರಘುಪತಿ ಭಟ್ ಭೂ ಮಾತೆಗೆ ಹಾಲನ್ನು ಅರ್ಪಿಸಿ ನೇಜಿ ನೀಡುವುದರ ಮೂಲಕ ಕೈ ನಾಟಿಗೆ ಚಾಲನೆ ನೀಡಿದರು.

ಈ ಭಾಗದಲ್ಲಿ ಹಡಿಲು ಭೂಮಿ ಕೃಷಿ ಆಂದೋಲನಕ್ಕೆ ಸಹಕರಿಸಿ ನಿರಂತರವಾಗಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡ ಸಂಘ – ಸಂಸ್ಥೆಯವರಿಗೆ, ಭೂ ಮಾಲಕರಿಗೆ, ಕೃಷಿಕರಿಗೆ, ಸ್ಥಳೀಯರಿಗೆ ಶಾಸಕರು ಕೃತಜ್ಞತೆ ಸಲ್ಲಿಸಿದ್ದಾರೆ.

ನಗರಸಭಾ ಸದಸ್ಯೆ ಸವಿತಾ ಹರೀಶ್ ರಾಮ್, ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬುಬಕ್ಕರ್, ಮಾಜಿ ನಗರಸಭಾ ಸದಸ್ಯ ಹರೀಶ್ ರಾಮ್, ಬೂತ್ ಅಧ್ಯಕ್ಷ ಸುಧಾಕರ್, ಸ್ಥಳೀಯ ಕೃಷಿಕ ಬನ್ನಂಜೆ ಶಿವರಾಮ್ ಪೂಜಾರಿ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು, ಕೃಷಿಕರು, ಭೂ ಮಾಲಕರು, ಪ್ರಮುಖರು,ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply