ತೆಂಕನಿಡಿಯೂರು ಗ್ರಾಮ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

ಉಡುಪಿ: ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ತೆಂಕನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 60 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಇಂದು ತೆಂಕನಿಡಿಯೂರು ಕೆಳಾರ್ಕಳಬೆಟ್ಟು ಬೈಲಿನ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ರೋಬೋಸಾಫ್ಟ್ ಟೆಕ್ನೋಲಜಿಸ್ ನ ಹಣಕಾಸು ನಿರ್ದೇಶಕ ಸುಧೀರ್ ಭಟ್, ಮತ್ಸ್ಯೋದ್ಯಮಿ ಆನಂದ್ ಅಮೀನ್ , ಮಂಡಲ ಪಂಚಾಯತ್ ನ ಮಾಜಿ ಅಧ್ಯಕ್ಷ ವಿಠ್ಠಲ್ ಶೆಟ್ಟಿ, ಉದ್ಯಮಿ ವಸಂತ್ ನಾಯಕ್ ರೊಂದಿಗೆ ಶಾಸಕ ಕೆ. ರಘುಪತಿ ಭಟ್ ಭೂ ಮಾತೆಗೆ ಹಾಲನ್ನು ಅರ್ಪಿಸಿ ನೇಜಿ ನೀಡುವ ಮೂಲಕ ಯಂತ್ರ ಹಾಗೂ ಕೈ ನಾಟಿಗೆ ಚಾಲನೆ ನೀಡಿ ಸ್ಥಳೀಯರೊಂದಿಗೆ ಸೇರಿ ನೇಜಿ ನೆಟ್ಟರು.

ಈ ಭಾಗದಲ್ಲಿ ಹಡಿಲು ಭೂಮಿ ಆಂದೋಲನಕ್ಕೆ ಸಹಕರಿಸಿದ ಸಂಘ – ಸಂಸ್ಥೆಯವರಿಗೆ, ಭೂ ಮಾಲಕರಿಗೆ, ಸ್ಥಳೀಯರಿಗೆ ಶಾಸಕ ಕೆ. ರಘುಪತಿ ಭಟ್ ಅವರು ಅಭಿನಂದನೆ ಸಲ್ಲಿಸಿದರು.

ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷ ಅರುಣ್ ಜತ್ತನ್, ಉಡುಪಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಶರತ್ ಬೈಲಕೆರೆ, ತೆಂಕನಿಡಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೃಷ್ಣಯ್ಯ ಶೆಟ್ಟಿ ಕೇದಾರೋತ್ಥಾನ ಟ್ರಸ್ಟ್ ನ ಕೋಶಾಧಿಕಾರಿ ರಾಘವೇಂದ್ರ ಕಿಣಿ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿ ಶಂಕರ್, ತೆಂಕನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಸಂಘ ಸಂಸ್ಥೆಯ ಸದಸ್ಯರು, ಕೃಷಿಕರು, ಪ್ರಮುಖರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply