ವಿಕಲಚೇತನರ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ, ಅಕ್ಟೋಬರ್ 12 (ಕವಾ): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸುತ್ತಿರುವ ಹಾಗೂ ಸಲ್ಲಿಸಿರುವ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ
ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ  ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು, ಜಿಲ್ಲಾ
ಪಂಚಾಯತ್ ವಿಭಾಗ, ಜಿಲ್ಲಾಧಿಕಾರಿ ಕಚೇರಿ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574810, 2574811 ಅನ್ನು
ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply