ಉಡುಪಿ : ಶಾಲಾ ಬಸ್ ಚಲಾಯಿಸುವಾಗ ಹೃದಯಾಘಾತ; ಚಾಲಕನ ಸಮಯಪ್ರಜ್ಞೆಯಿಂದ ಮಕ್ಕಳು ಸೇಫ್!

ಶಾಲಾ ಬಸ್ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಕೂಡಲೇ ಆತನ ಸಮಯ ಪ್ರಜ್ಞೆ ಯಿಂದ ಮಕ್ಕಳು ಸೇಫ್ ಆದ ಘಟನೆ ಪೆರಂಪಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ.

ಪೆರಂಪಳ್ಳಿಯಿಂದ ಮಣಿಪಾಲದತ್ತ ಬರುತ್ತಿದ್ದ ಶಾಲಾ ಬಸ್ ಚಾಲಕ ಆಲ್ವಿನ್ ಅವರಿಗೆ ಲಘು ಹೃದಯಾಘಾತವಾಗಿದೆ. ಈ ವೇಳೆ ಬಸ್ ನಲ್ಲಿದ್ದ ಸಹಾಯಕ ಸಿಬಂದಿ ಅವರನ್ನು ಮತ್ತೊಂದು ವಾಹನದಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬ್ರಹ್ಮಾವರದ ಖಾಸಗಿ ಶಾಲೆಯಿಂದ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್, ಘಟನೆಯಿಂದ ಕೆಲವು ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

 
 
 
 
 
 
 
 
 
 
 

Leave a Reply