ಹಿರಿಯಡ್ಕ : ಕಣ್ಣಿನ ಉಚಿತ ತಪಾಸಣೆ, ಉಚಿತ ಶಸ್ತ್ರ ಚಿಕಿತ್ಸೆ, ನೇತ್ರದಾನ ನೋಂದಣಿ ಮತ್ತು ಉಚಿತ ಕನ್ನಡಕ ವಿತರಣೆ

ಹಿರಿಯಡ್ಕ : ಸೇವೆ ಮತ್ತು ಸಮರ್ಪಣೆ ಅಭಿಯಾನದ ಪ್ರಯುಕ್ತ ಇಂದು ಕಣ್ಣಿನ ಉಚಿತ ತಪಾಸಣೆ, ಉಚಿತ ಶಸ್ತ್ರ ಚಿಕಿತ್ಸೆ, ನೇತ್ರದಾನ ನೋಂದಣಿ ಮತ್ತು ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮವು ಹಿರಿಯಡ್ಕ ದೇವಾಡಿಗರ ಸಭಾ ಭವನದಲ್ಲಿ ನಡೆಯಿತು.

ಬಿಜೆಪಿ ಉಡುಪಿ ಜಿಲ್ಲೆ ನೇತೃತ್ವದಲ್ಲಿ, ಬಿಜೆಪಿ ವೈದ್ಯಕೀಯ ಪ್ರಕೋಷ್ಠ, ಉಡುಪಿ ಜಿಲ್ಲೆ, ಅಮೋಘ (ರಿ) ಉಡುಪಿ ಹಿರಿಯಡ್ಕ , ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಕಾರ್ಲ್ ಜೈಸ್ ಇಂಡಿಯಾ (ಬೆಂಗಳೂರು) ಪ್ರೈವೇಟ್ ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಂಧತ್ವ ನಿವಾರಣಾ ವಿಭಾಗ ಉಡುಪಿ ಜಿಲ್ಲೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡ್ಕ, ಇವರ ಜಂಟಿ ಸಹಯೋಗದೊಂದಿಗೆ ನಡೆದ ಈ ಶಿಬಿರವನ್ನು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಉದ್ಘಾಟಿಸಿದರು.

ಅತಿಥಿ ಯಗಳಾಗಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ್ ಕುಮಾರ್ ಶೆಟ್ಟಿ, ಕಾಪು ವಿಧಾನಸಭಾ ಕ್ಷೇತ್ರ ಯಾರು ಶಾಸಕ ಲಾಲಾಜಿ ಆರ್ ಮೆಂಡನ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಪ್ರಸಾದ್ ನೇತ್ರಾಲಯ ,ಉಡುಪಿಯ ವೈದ್ಯಕೀಯ ನಿರ್ದೇಶಕ ಡಾ.ನಾಡೋಜ ಕೃಷ್ಣ ಪ್ರಸಾದ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ , ರಾಜ್ಯ ವೈದ್ಯಕೀಯ ಪ್ರಕೋಷ್ಠದ ಸದಸ್ಯ ಡಾ. ವಿಜಯೇಂದ್ರ ರಾವ್ ಉಡುಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ಡಾ. ರಾಮಚಂದ್ರ ಕಾಮತ್, ಉಡುಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಸಹ ಸಂಚಾಲಕ ಡಾ. ವಿದ್ಯಾಧರ ಶೆಟ್ಟಿ ಕೆ. ಭಾಗವಹಿಸಿದರು. 

ರಾಷ್ಟ್ರೀಯ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಶಿಲ್ಪ ಸುವರ್ಣ , ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಸುವರ್ಣ, ರಾಜ್ಯ ಎಸ್. ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು , ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ , ಜಿಲ್ಲಾ ಕಾರ್ಯಾಲಯದ ಕಾರ್ಯದರ್ಶಿ ಸತ್ಯಾನಂದ ನಾಯಕ್ ಉಪಸ್ಥಿತರಿದ್ದರು.

ವೀಣಾ ಶೆಟ್ಟಿ -ನಿರೂಪಿಸಿ, ಮಂಡಲದ ಅಧ್ಯಕ್ಷ ಶ್ರೀಕಾಂತ್ ನಾಯಕ್ ಸ್ವಾಗತಿಸಿ, ವಿಜೇತ್ ಕುಮಾರ್ ಬೆಳ್ಳರ್ಪಡಿ ವಂದಿಸಿದರು. 582 ಸಾರ್ವಜನಿಕರ ನೇತ್ರ ಪರೀಕ್ಷೆ ನಡೆಸಲಾಯಿತು. ಅವಶ್ಯಕತೆ ಇರುವ ಸಾರ್ವಜನಿಕರಿಗೆ ಅ. 27 ರಂದು ಕನ್ನಡಕ ವಿತರಿಸಲಾಗುವುದು.

 
 
 
 
 
 
 
 
 
 
 

Leave a Reply