ಮಂಗಳೂರು : ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಕೆ

ಮಂಗಳೂರು : ಬುಧವಾರ ಹುತಾತ್ಮರಾದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಎಲ್ಲಾ ಯೋಧರಿಗೂ ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲದದಿಂದ ಕದ್ರಿ ಯೋಧ ಸ್ಮಾರಕದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಮಂಗಳೂರು ನಗರ ದಕ್ಷಿಣದ ಶಾಸಕ ವೇದವ್ಯಾಸ್ ಕಾಮತ್ , ಬಿಜೆಪಿ ರಾಜ್ಯ ವಕ್ತಾರರು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ,ಮೇಯರ್ ಪ್ರೇಮಾನಂದ ಶೆಟ್ಟಿ ,ಬ್ರಿಗೇಡಿಯರ್ . ಐ. ನ್ ರೈ , ಶರತ್ ಭಂಡಾರಿ , ಆದಿತ್ಯನಾಥ್ ಯುವ ಮೋರ್ಚಾ ಮಂಗಳೂರು ನಗರ ದಕ್ಷಿಣದ ಅಧ್ಯಕ್ಷ ಸಚಿನ್ ರಾಜ್ ರೈ ,ಮಂಗಳೂರು ನಗರ ದಕ್ಷಿಣ ಮಂಡಲದ ಪ್ರದಾನ ಕಾರ್ಯದರ್ಶಿ ರೂಪ ಡಿ ಬಂಗೇರ,ಸ್ಥಳೀಯ ಕಾರ್ಪೊರೇಟರ್ ಶಕೀಲಾ ಕವಾ , ಕಾರ್ಪೊರೇಟರ್ ಮನೋಹರ್ ಶೆಟ್ಟಿ, ಪಾಲಿಕೆ ನಾಮನಿರ್ದೇಶಿತ ಸದಸ್ಯ ರಮೇಶ್ ಕಂಡೆಟ್ಟು, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜೀವನ್ ರಾವ್ ಮಾಜಿ ಸೈನಿಕ ಸಂಘದ ಪದಾಧಿಕಾರಿ ಹಾಗೂ ಯುವ ಮೋರ್ಚಾದ ಪದಾಧಿಕಾರಿ ಹಾಗೂ ಸದಸ್ಯರು ಭಾಗವಹಿಸಿದ್ದರು.

 
 
 
 
 
 
 

Leave a Reply