49 ಕೆಜಿ ಗಾಂಜಾ ವಶ, ಇಬ್ಬರು ಸೆರೆ

ಉಡುಪಿ : ಕಂಟೈನರ್ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 49 ಕೆಜಿ ಗಾಂಜಾವನ್ನು ಉಡುಪಿ ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡಿನ ತಿರುವನ್ ವೆಲ್ಲಿ ಜಿಲ್ಲೆಯ ಕರುತಪಾಂಡಿ (40) ಮತ್ತು ಪಶ್ಚಿಮ ಬಂಗಾಳದ ವಾನುಹಲ್ ದಾರ್ (30) ಎಂದು ಗುರುತಿಸಲಾಗಿದೆ.

ಉತ್ತರಪ್ರದೇಶದಿಂದ ಕರಾವಳಿಗೆ ಬಿದಿರು ತುಂಬಿಸಿಕೊಂಡು ಬರುತ್ತಿದ್ದ ಲಾರಿಯನ್ನು ಬ್ರಹ್ಮಾವರ ತಾಲೂಕು ಹೇರೂರು ಬಳಿ ಪೊಲೀಸರು ತಡೆದು ತಪಾಸಣೆ ನಡೆಸಿ ಸುಮಾರು 49 ಕೆಜಿ 150 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಿದಿರಿನ ಒಳಗೆ ಗಾಂಜಾವನ್ನು ತುಂಬಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

 
 
 
 
 
 
 
 
 
 
 

Leave a Reply