ಜಿಲ್ಲಾ ಮಟ್ಟದ ಸ್ವಾತಂತ್ರೋತ್ಸವ ಕಾರ್ಯಕ್ರಮ ಆಚರಣೆ ಕುರಿತ ಪೂರ್ವಭಾವಿ ಸಭೆ

ಉಡುಪಿ : ಅಜ್ಜರಕಾಡು ಮಹಾತ್ಮಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಆಗಸ್ಟ್ 15 ರಂದು ನಡೆಯುವ ಜಿಲ್ಲಾ ಮಟ್ಟದ ಸ್ವಾತಂತ್ರೋತ್ಸವ ಕಾರ್ಯಕ್ರಮ ಆಚರಣೆ ಕುರಿತ ಪೂರ್ವಭಾವಿ ಸಭೆಯು ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆಯಿತು.

ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಕೋವಿಡ್ ಮಾರ್ಗಸೂಚಿಯನ್ವಯ ಆಚರಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ, ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಪಾಲಿಸುವಂತೆ ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವವನ್ನು ಕಡ್ಡಾಯವಾಗಿ ಥರ್ಮಲ್ ಸ್ಕ್ಯಾನರ್ ಮೂಲಕ ಪರಿಶೀಲಿಸುವಂತೆ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಕೋವಿಡ್ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಎಲ್ಲಾ ವಿಭಾಗದ ಕೋವಿಡ್ ವಾರಿಯರ್ಸ್ ಗಳನ್ನು ಗುರುತಿಸಿ ಅವರನ್ನು ಸನ್ಮಾನಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು,ಕಾರ್ಯಕ್ರಮವನ್ನು ಸಾರ್ವಜನಿಕರು ವೀಕ್ಷಿಸಲು ಅನುಕೂಲವಾಗುವಂತೆ ವೆಬ್ ಕಾಸ್ಟಿಂಗ್ ಮೂಲಕ ಪ್ರಸಾರ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಪೊಲೀಸ್, ಅಗ್ನಿಶಾಮಕ, ಎ.ಎನ್.ಎಫ್., ಕರಾವಳಿ ಕಾವಲು ಪಡೆ, ಅಬಕಾರಿ, ಅರಣ್ಯ ಇಲಾಖೆಗಳಿಂದ ಆಕರ್ಷಕ ಪಥ ಸಂಚಲನ ಏರ್ಪಡಿಸುವಂತೆ ತಿಳಿಸಿದ ಅವರು, ಕಾರ್ಯಕ್ರಮದ ಆಯೋಜನೆಗಾಗಿ ವಿವಿಧ ಅಧಿಕಾರಿಗಳ ನೇತೃತ್ವದ ವಿವಿಧ ಸಮಿತಿಗಳನ್ನು ರಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply