ಉಡುಪಿ  ಜನಸೇವಕ ಸಮಾವೇಶ 

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಜನಮನ ಮುಟ್ಟಿಸುವ ಮೂಲಕ  ತಾಲೂಕು ಪಂಚಾಯತ್  ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯ ಸಿದ್ಧತೆಯ ದೃಷ್ಟಿಯಿಂದ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಜನಸೇವಕ ಸಮಾವೇಶ ಮಂಗಳವಾರ ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ ನಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿ.ಟಿ ರವಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಕೆ.ಎಸ್. ಈಶ್ವರಪ್ಪ, ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ಅರವಿಂದ ಲಿಂಬಾವಳಿ, ಶಾಸಕ ಶ್ರೀ ಕೆ. ರಘುಪತಿ ಭಟ್. 
ರಾಜ್ಯ ಉಪಾಧ್ಯಕ್ಷರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶೋಭಾ ಕರಂದ್ಲಾಜೆ, ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ರಾಜ್ಯಸಭಾ ಸದಸ್ಯರು ಮತ್ತು ರೈತ ಮೋರ್ಚಾ ರಾಜ್ಯ ಅಧ್ಯಕ್ಷರಾದ ಈರಣ್ಣ ಕಡಾಡಿ, 
ಜಿಲ್ಲಾ ಪ್ರಭಾರಿಗಳಾದ ಉಮಾನಾಥ್ ಕೋಟ್ಯಾನ್, ಕಾರ್ಕಳ ಕ್ಷೇತ್ರದ ಶಾಸಕರಾದ ವಿ ಸುನೀಲ್ ಕುಮಾರ್, ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬೈಂದೂರು ಕ್ಷೇತ್ರದ ಶಾಸಕರಾದ ಬಿ. ಎಂ ಸುಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, 
ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ ಮತ್ತು ಪಕ್ಷದ ಮುಖಂಡರು, ಪ್ರಮುಖರು, ಹಿರಿಯರು, ಕಾರ್ಯಕರ್ತರು ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply