ಆಗಸ್ಟ್, 12 , ಜಿಲ್ಲಾ ಆಸ್ಪತ್ರೆಯನ್ನು ಶೀಘ್ರದಲ್ಲಿಯೇ ಮೇಲ್ದರ್ಜೆಗೇರಿಸಿ 300 ಬೆಡ್‌ಗಳ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಗರದ ಕಂಟ್ರಿ ಹೋಟೆಲ್‌ನ ಸಭಾಂಗಣದಲ್ಲಿ ಜಿಲ್ಲಾಡಳಿತಕ್ಕೆ ವೆಂಟಿಲೇಟರ್ ಹಸ್ತಾಂತರಿಸುವ ಕಾರ‍್ಯಕ್ರಮದಲ್ಲಿ ವೆಂಟಿಲೇಟರ್‌ಗಳನ್ನು ಹಸ್ತಾಂತರಿಸಿ ಮಾತನಾಡಿದರು. ಉಡುಪಿಯ ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಗಳು ಅನುಮೋದನೆಯನ್ನು ನೀಡಿದ್ದಾರೆ. ಅನುದಾನವು ಹಣಕಾಸು ಇಲಾಖೆಯಿಂದ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಎಂದರು.

ಸರ್ಕಾರವು ಕೂಡ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಪ್ರಯತ್ನ ನಡೆಸುತ್ತಲೇ ಇದೆ. ಇಂದು ನೀಡಿದ ವೆಂಟಿಲೇಟರ್‌ಗಳನ್ನು ಸರ್ಕಾರ ಹಾಗೂ ಖಾಸಗಿ ಆಸ್ಪತ್ರೆಗಳ ಸಹಯೋಗದಲ್ಲಿ ಬಳಕೆ ಮಾಡಿಕೊಳ್ಳಲಾಗುವುದು ಎಂದರು. ಕೊರೋನಾ ಸವಾಲಿನ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಕ್ಕೆ ವೆಂಟಿಲೇಟರ್‌ಗಳನ್ನು ದಾನವಾಗಿ ನೀಡಿದ ಡಾ.ಜಿ. ಶಂಕರ್, ಆಭರಣ ಜ್ಯುವೆಲ್ಲರ್ಸ್, ರೋಬೋ ಸಾಫ್ಟವೇರ್ ಟೆಕ್ನಾಲಜಿ ಹಾಗೂ ಹೆಗ್ಗುಂಜೆ ರಾಜೀವ್ ಶೆಟ್ಟಿ ಚಾರಿಟೇಬಲ್ ಸೊಸೈಟಿಯ ಎಚ್.ಎನ್ ಶೆಟ್ಟಿಯವರಿಗೆ ಅಭಿನಂದನೆಗೈದರು.
ಉಡುಪಿ ಶಾಸಕ ರಘುಪತಿ ಭಟ್, ಕಾರ್ಕಳ ಶಾಸಕ ಸುನೀಲ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾಧಿಕಾರಿ ಜಿ. ಜಗದೀಶ್, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮತ್ತಿತರು ಉಪಸ್ಥಿತರಿದ್ದರು.